Monday, October 2, 2023
Homeರಾಜಕೀಯರೈತನ ಸಾವಿಗೆ ಕುಡಿತ ಕಾರಣ: ಬಿಜೆಪಿ

ರೈತನ ಸಾವಿಗೆ ಕುಡಿತ ಕಾರಣ: ಬಿಜೆಪಿ

- Advertisement -



Renault

Renault
Renault

- Advertisement -

ಬೆಂಗಳೂರು: ನಿಮ್ಮ ದುರಾಡಳಿತದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಾಗ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಹೇಳಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಯಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ರಾಜ್ಯ ಕಾಂಗ್ರೆಸ್’ಗೆ ಬಿಜೆಪಿ ಪ್ರಶ್ನಿಸಿದೆ.ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ರೈತ ಸಮೂಹ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಕಾಂಗ್ರೆಸ್ ಪಕ್ಷ ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ, ಸಮಾವೇಶ ಹಾಗೂ ರಾಜಭವನ ಚಲೋ ನಡೆಸುತ್ತಿದೆ.ಈ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ನಿಮ್ಮ ದುರಾಡಳಿತದಲ್ಲಿ ರೈತ ವಿಠಲ ಅರಭಾವಿ ಆತ್ಮಹತ್ಯೆಯ ಮಾಡಿಕೊಂಡಾಗ, ʼರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼ ಎಂದು ಹೇಳಿದ್ದಿರಿ.

ಈಗ ರಾಜಭವನ ಚಲೋ ಎಂಬ ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ? ಎಂದು ಪ್ರಶ್ನಿಸಿದೆ.2013-14 – 104, 2014-15 – 128, 2015-16 – 1483, 2016-17 – 1185, 2018-19 – 900, 3800 ಕ್ಕೂ ಅಧಿಕ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದರೂ, ಅವರ ಕಣ್ಣೀರು ಒರೆಸುವ ಬದಲು ಟಿಪ್ಪು ಜಯಂತಿ ಆಚರಣೆಯಲ್ಲಿ ನಿರತರಾಗಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ, ಚೆನ್ನಾಗಿದೆ.ಅಧಿಕಾರದುದ್ದಕ್ಕೂ ರೈತರ ಆತ್ಮಹತ್ಯೆಗಳಿಗೆ ಕಾರಣವಾದ ಕಾಂಗ್ರೆಸ್, ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದ ರೈತ ಪರ ಕಾಯ್ದೆಗಳಿಗೆ ನಾಟಕೀಯ ವಿರೋಧ ವ್ಯಕ್ತಪಡಿಸುತ್ತಿದ್ದೀರಿ. ನೀವು ರೈತ ಪರ ಆಡಳಿತ ನಡೆಸಿದ್ದರೆ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುತ್ತಿರಲಿಲ್ಲ, ಅಲ್ಲವೇ?…2019 ರ ಲೋಕಸಭಾ ಚುನಾವಣೆಯ ಪ್ರಣಾಳಿಕೆಯಲ್ಲಿ ಎಪಿಎಂಸಿ ಕಾಯ್ದೆಗಳನ್ನು ರದ್ದು ಮಾಡುವುದುದಾಗಿ ಕಾಂಗ್ರೆಸ್ ಘೋಷಿಸಿತ್ತು. ನರೇಂದ್ರ ಮೋದಿ ಸರ್ಕಾರ ಆ ಕಾರ್ಯ ಮಾಡಿದಾಗ ಮಾತ್ರ ಬೀದಿಗೆ ಬಂದು ಬೊಬ್ಬೆ ಹೊಡೆಯುತ್ತಿದ್ದಾರೆ. ನಿಮ್ಮ ದುರಾಡಳಿತದಲ್ಲಿ ರೈತ ವಿಠಲ ಅರಭಾವಿ ಆತ್ಮಹತ್ಯೆಯ ಮಾಡಿಕೊಂಡಾಗ, ʼರೈತನ ಆತ್ಮಹತ್ಯೆಗೂ ಸರ್ಕಾರಕ್ಕೂ ಯಾವುದೇ ಸಂಬಂಧವಿಲ್ಲ, ಚೆನ್ನಾಗಿ ಕುಡಿದಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆʼ ಎಂದು ಹೇಳಿದ್ದಿರಿ. ಈಗ ರಾಜಭವನ ಚಲೋ ಎಂಬ ನಾಟಕ ಮಾಡುವ ನಿಮಗೆ ನಾಚಿಕೆಯಾಗುವುದಿಲ್ಲವೇ?…ಪ್ರಧಾನಿ ಮೋದಿ ಸರ್ಕಾರ ರೈತರ ಆದಾಯ ದ್ವಿಗುಣಗೊಳಿಸಲು ಕೃಷಿ ಮಸೂದೆ ಜಾರಿಗೆ ತಂದಿತು. ರೈತರು ನೇರವಾಗಿ ಮಾರಾಟ ಮಾಡಿದರೆ ಹೆಚ್ಚು‌ ಲಾಭಗಳಿಸುತ್ತಾರೆ ಎಂಬುದು ಲೋಕ ಸತ್ಯ. ಆದರೆ ನೀವು ಮಾತ್ರ ಇದನ್ನು ವಿರೋಧಿಸುತ್ತಿದ್ದೀರಿ. ಕಾಂಗ್ರೆಸ್ ನೀವೇಕೆ ದಲ್ಲಾಳಿಗಳ ಪರ ವಕಾಲತ್ತು ವಹಿಸುತ್ತೀರಿ?…ಪ್ರಧಾನಮಂದ್ರಿ ನರೇಂದ್ರ ಮೋದಿ ಸರ್ಕಾರ ರೈತರಿಗಾಗಿ ಶ್ರಮಿಸಿದಷ್ಟು ಯಾವ ಸರ್ಕಾರವೂ ಶ್ರಮಿಸಿಲ್ಲ. ಅನ್ನದಾತರಿಗೆ ಯೂರಿಯಾ ಸುಲಭವಾಗಿ ಲಭ್ಯವಾಗುತ್ತಿದೆ. ಕನಿಷ್ಠ ಬೆಂಬಲ ಬೆಲೆಯ ಏರಿಕೆ. ಖರೀದಿ ವ್ಯವಸ್ಥೆ ಬಲಪಡಿಸಲಾಗಿದೆ. ಕಾಂಗ್ರೆಸ್ ಊಹಿಸದ ರೀತಿಯಲ್ಲಿ ಮೋದಿ ಸರ್ಕಾರ ರೈತರಿಗೆ ಸ್ಪಂದಿಸುತ್ತಿದೆ.ಧಾರವಾಡದ ನವಲಗುಂದ ತಾಲ್ಲೂಕಿನ ಯಮನೂರು ರೈತರ ಮೇಲೆ ಯಮನಂತೆ ಎರಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಲು ಕಾಂಗ್ರೆಸ್ ಕುಮ್ಮಕ್ಕು ನೀಡಿತ್ತು. ಅದೇ ರೈತ ವಿರೋಧಿ ಕಾಂಗ್ರೆಸ್ ಇಂದು ಬೂಟಾಟಿಕೆ ಪ್ರದರ್ಶನ ಮಾಡುತ್ತಿದೆ. ರಾಜಭವನ ಚಲೋ ಎಂಬುದು ಕಾಂಗ್ರೆಸ್‌ ಅಸ್ತಿತ್ವದ ಹೋರಾಟವೇ ಹೊರತು ರೈತಪರ ಹೋರಾಟವಲ್ಲ ಎಂದು ಕಿಡಿಕಾರಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments