ಬೆಂಗಳೂರು: ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಕಾಂಗ್ರೆಸ್ ಹಮ್ಮಿಕೊಂಡಿದ್ದ ರಾಜಭವನ ಚಲೋ ಪ್ರತಿಭಟನೆಯನ್ನು ಪೊಲೀಸರು ತಡೆದಿದ್ದಾರೆ. ಮಹಾರಾಣಿ ಕಾಲೇಜು ಬಳಿ ತಡೆದ ಪೊಲೀಸರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಮೆಜೆಸ್ಟಿಕ್ ನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಮೆಯಿಂದ ಹೊರಟ ಪ್ರತಿಭಟನಾ ಮೆರವಣಿಗೆ ರಾಜಭವನದತ್ತ ಹೊರಟಿತ್ತು. ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು, ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಮಹಾರಾಣಿ ಕಾಲೇಜು ಬಳಿ ಪೊಲೀಸರು ತಡೆದಿದ್ದು, ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ, ಜಿ ಪರಮೇಶ್ವರ್ ಸೇರಿದಂತೆ ಹಲವು ನಾಯಕರನ್ನು ವಶಕ್ಕೆ ಪಡೆದಿದ್ದಾರೆ.

LEAVE A REPLY

Please enter your comment!
Please enter your name here