Wednesday, September 28, 2022
Homeರಾಜಕೀಯಕೈ ಮುಖಂಡರ ಮಾನಸಿಕ ಅಸ್ವಸ್ಥ ಸ್ಥಿತಿಗೆ ಅಧಿಕಾರ ಇಲ್ಲದೇ ಇರುವುದು ಕಾರಣ : ನಳಿನ್

ಕೈ ಮುಖಂಡರ ಮಾನಸಿಕ ಅಸ್ವಸ್ಥ ಸ್ಥಿತಿಗೆ ಅಧಿಕಾರ ಇಲ್ಲದೇ ಇರುವುದು ಕಾರಣ : ನಳಿನ್

- Advertisement -
Renault

Renault

Renault

Renault


- Advertisement -

ಅಧಿಕಾರ ಇಲ್ಲದೇ ಕಾಂಗ್ರೆಸ್ ನಾಯಕರು ಈಗಾಗಲೇ ಮಾನಸಿಕ ಅಸ್ವಸ್ಥರಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟು ಲೇವಡಿ ಮಾಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಬಿಜೆಪಿಯದ್ದಾದ ಮೇಲೆ ಕಾಂಗ್ರೆಸ್ ನಾಯಕರು ನಂಬಿಕೆ ಕಳೆದುಕೊಂಡಿದ್ದಾರೆ. ಇನ್ನೂ ಹತ್ತು ವರ್ಷಗಳ ಕಾಲ ಅಧಿಕಾರಕ್ಕೆ ಬರುವುದಿಲ್ಲ ಎಂದು ಬಾಯಿಗೆ ಬಂದ ಹಾಗೆ ಮಾತನಾಡುತ್ತಿದ್ದಾರೆ ಎಂದು ಕುಟುಕಿದರು.
ನಗರದಲ್ಲಿ ಎರಡು ದಿನಗಳ ಕಾಲ ವಿಶೇಷ ಸಭೆ ನಡೆಯಲಿದೆ. ಸಭೆಯಲ್ಲಿ ಹಲವು ಸಂಗತಿಗಳ ಬಗ್ಗೆ ಚರ್ಚೆ ನಡೆಸಲಾಗುವುದು. ಶಿವಮೊಗ್ಗ ಹಿಂದಿನಿಂದಲೂ ಬಿಜೆಪಿಯ ಸಂಘಟನಾತ್ನಕ ಪ್ರಯೋಗಗಳಿಗೆ ಸಾಕ್ಷಿಯಾಗಿದೆ. ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಮುಕ್ತವಾಗಿ ಹಲವು ಸಂಗತಿಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ರಾಘವೇಂದ್ರ, ಗೃಹ ಮಂಡಳಿ ಅಧ್ಯಕ್ಷ ಆರಗ ಜ್ನಾನೇಂದ್ರ, ಪರಿಷತ್ ಸದಸ್ಯ ಎಸ್.ರುದ್ರೇಗೌಡ, ಜಿಲ್ಲಾ ಬಿಜೆಪಿ ಅಧ್ಯಕ್ಷ ಟಿ.ಡಿ. ಮೇಘರಾಜ್ ಇನ್ನಿತರರು ಹಾಜರಿದ್ದರು.

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments