ಗದಗ : ರಾಜ್ಯದಾದ್ಯಂತ ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ಶಾಲೆಗಳು ಪುನರಾರಂಭಗೊಂಡಿವೆ. ಸುಮಾರು 10 ತಿಂಗಳ ನಂತರ ವಿದ್ಯಾರ್ಥಿಗಳು ಶಾಲೆಗಳತ್ತ ಮುಖ ಮಾಡಿದ್ದಾರೆ. ಶಾಲಾರಂಭದ ಬೆನ್ನಲ್ಲೇ ಇದೀಗ ಶಾಕಿಂಗ್ ಸುದ್ದಿಯೊಂದು ಹೊರಬಿದ್ದಿದ್ದು, ಗದಗದ ಐದು ಶಾಲೆಗಳ 10 ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ.

ಗದಗ ನಗರದ ನಾಲ್ಕು ಹಾಗೂ ನರಗುಂದ ತಾಲೂಕಿನ ಜಗಾಪೂರ ಗ್ರಾಮದ ಪ್ರೌಢಶಾಲೆಯ 10 ಮಂದಿ ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಹೀಗಾಗಿ ಶಾಲೆಗೆ ಬಂದಿದ್ದ ಮಕ್ಕಳನ್ನು ಮನೆಗಳಿಗೆ ವಾಪಾಸ್ ಕಳುಹಿಸಲಾಗಿದೆ. ಶಾಲಾರಂಭದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯಲ್ಲಿ ಒಟ್ಟು 6,665 ಮಂದಿ ಶಿಕ್ಷಕರನ್ನು ಕೊರೊನಾ ತಪಾಸಣೆಗೆ ಒಳಪಡಿಸಲಾಗಿತ್ತು. ಈ 10 ಮಂದಿ ಶಿಕ್ಷಕರಿಗೆ ಸೋಂಕು ಇರುವುದು ದೃಢಪಟ್ಟಿದೆ. ಎಲ್ಲಾ ಶಿಕ್ಷಕರನ್ನು ಇದೀಗ ಹೋಮ್ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ. ಆರೋಗ್ಯ ಇಲಾಖೆಯ ಮಾರ್ಗದರ್ಶನದಲ್ಲಿ ಶಾಲೆಗಳನ್ನು ಓಪನ್ಮಾಡುವ ಕುರಿತು ನಿರ್ಧಾರ ಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂದು ಗದಗ ಜಿಲ್ಲೆಯ ಡಿಡಿಪಿಐ ಬಸವಲಿಂಗಪ್ಪ ತಿಳಿಸಿದ್ದಾರೆ.

ಶಾಲಾರಂಭದ ಬೆನ್ನಲ್ಲೇ ಇದೀಗ ಶಿಕ್ಷಕರಲ್ಲಿ ಕೊರೊನಾ ಸೋಂಕು ಪತ್ತೆಯಾಗಿರೋದು ಆತಂಕ ಮೂಡಿಸಿದೆ. ಕೊರೊನಾ ಭಯದಲ್ಲಿಯೇ ಶಾಲೆಗೆ ಆಗಮಿಸಿದ್ದ ಮಕ್ಕಳಿಗೆ ನಿಜಕ್ಕೂ ಶಾಕ್ ಎದುರಾಗಿದೆ. ಶಿಕ್ಷಕರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿ ರೋದ್ರಿಂದಾಗಿ ಪೋಷಕರು ಕೂಡ ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂದೇಟು ಹಾಕುತ್ತಿದ್ದಾರೆ.

LEAVE A REPLY

Please enter your comment!
Please enter your name here