ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಶಿವಮೊಗ್ಗದಲ್ಲಿ ಬಿಜೆಪಿ ಕರ್ನಾಟಕ ವಿಶೇಷ ಸಭೆ ನಡೆಯಿತು. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸಹಿತ ಪಕ್ಷದ ಮುಖಂಡರು ಈ ಸಂದರ್ಭದಲ್ಲಿದ್ದರು.
ಇದಕ್ಕೂ ಮುನ್ನ ಶನಿವಾರ ವಿಶೇಷ ಸಭೆಯ ಭಾಗವಾಗಿ ಕೋರ್ ಕಮಿಟಿ ಸಭೆ ನಡೆಯಿತು.
ಈ ಸಭೆಯಲ್ಲಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಮತ್ತು ರಾಜ್ಯ ಉಸ್ತುವಾರಿಗಳಾದ ಅರುಣ್ ಸಿಂಗ್, ಕೇಂದ್ರ ಸಚಿವರುಗಳಾದ ಪ್ರಲ್ಹಾದ್ ಜೋಶಿ, ಡಿ. ವಿ. ಸದಾನಂದ ಗೌಡ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಉಪಮುಖ್ಯಮಂತ್ರಿ ಎಂ. ಗೋವಿಂದ ಕಾರಜೋಳ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್, ರಾಜ್ಯ ಸಚಿವರುಗಳಾದ ಜಗದೀಶ್ ಶೆಟ್ಟರ್, ಕೆ. ಎಸ್. ಈಶ್ವರಪ್ಪ, ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ ಉಪಸ್ಥಿತರಿದ್ದರು