ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರು ಹೃದಯಾಘಾತಕ್ಕೊಳಗಾದ ಹಿನ್ನೆಲೆಯಲ್ಲಿ ಅವರನ್ನು ಶನಿವಾರ ಕೋಲ್ಕತ್ತಾದ ವುಡ್‌ಲ್ಯಾಂಡ್ ಆಸ್ಪತ್ರೆಗೆ ದಾಖಲಿಸಿ, ಆಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ.
“ಗಂಗೂಲಿ ಅವರಿಗೆ ಆಯಂಜಿಯೋ ಪ್ಲಾಸ್ಟಿ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಇದೀಗ ಗಂಗೂಲಿ ಸಂಪೂರ್ಣ ಪ್ರಜ್ಞಾ ಸ್ಥಿತಿಗೆ ಬಂದಿದ್ದು, ಆರೋಗ್ಯದಲ್ಲಿ ಚೇತರಿಕೆ ಇದೆ. ಅವರ ಆರೋಗ್ಯದ ಕುರಿತು 24 ಗಂಟೆಗಳ ಕಾಲ ನಿಗಾವಹಿಸುತ್ತಿದ್ದೇವೆ” ಎಂದು ವುಡ್‌ಲ್ಯಾಂಡ್ ಆಸ್ಪತ್ರೆಯ ವೈದ್ಯ ಡಾ. ಅಫ್ತಾಬ್ ಖಾನ್ ತಿಳಿಸಿದ್ದಾರೆ.
ಅವರ ಹೃದಯದಲ್ಲಿ ಎರಡು ಅಡೆತಡೆಗಳಿದ್ದು, ಅದಕ್ಕೆ ಚಿಕಿತ್ಸೆ ನೀಡಲಾಗುವುದು. ಸದ್ಯ ವೈದ್ಯಕೀಯ ಮೇಲ್ವಿಚಾರಣೆಯಲ್ಲಿ ಇರಲಿದ್ದಾರೆ. ಆರೋಗ್ಯ ಈಗ ಸ್ಥಿರವಾಗಿದೆ ಎಂದು ಖಾನ್ ಹೇಳಿದ್ದಾರೆ.