ಗುಂಟೂರು,ಜನವರಿ 04:ಟಿಡಿಪಿ ನಾಯಕನ ಕತ್ತು ಸೀಳಿ ಹತ್ಯೆ ಮಾಡಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದೆ.ಈ ಹತ್ಯೆ ಹಿಂದೆ ರಾಜಕೀಯ ವೈಷಮ್ಯದ ಶಂಕೆ ಎದುರಾಗಿದ್ದು, ಈ ಹತ್ಯೆ ಇದೀಗ ಇಡೀ ಗುಂಟೂರು ಜಿಲ್ಲೆಯನ್ನು ಬೆಚ್ಚಿ ಬೀಳುವಂತೆ ಮಾಡಿದೆ.

ಗುಂಟೂರು ಜಿಲ್ಲೆಯ ಪಲ್ನಾಡಿಯಲ್ಲಿ ತೆಲುಗುದೇಶಂ ಪಕ್ಷದ ಮುಖಂಡ ಹಾಗೂ ದಾಚೆಪಲ್ಲಿ ಮಂಡಲದ ಮಾಜಿ ಸರ್ಪಂಚ್ ಪುರನ್‌ಸೆಟ್ಟಿ ಅಂಕುಲು ಅವರನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದಿದ್ದಾರೆ. ತಡರಾತ್ರಿ ಅವರ ಮೇಲೆ ದಾಳಿ ಮಾಡಿದ ದುಷ್ಕರ್ಮಿಗಳು ಅವರ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ.

ಪುರನ್‌ಸೆಟ್ಟಿ ಅಂಕುಲು ಅವರ ಅಂತ್ಯಕ್ರಿಯೆಗೆ ಟಿಡಿಪಿ ಮುಖಂಡ ಹಾಗೂ ಆಂಧ್ರ ಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್ ಪಾಲ್ಗೊಳ್ಳಲ್ಲಿದ್ದಾರೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಸಿದ್ದು, ಪ್ರಾಥಮಿಕ ತನಿಖೆ ನಡೆಸಿದರು. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.

ಭಾನುವಾರ ರಾತ್ರಿ ಸುಮಾರು 8 ಗಂಟೆ ಸುಮಾರಿನಲ್ಲಿ ದುಷ್ಕರ್ಮಿಗಳು ಪುರನ್‌ಸೆಟ್ಟಿ ಅಂಕುಲು ಅವರ ಕತ್ತು ಸೀಳಿ ಹತ್ಯೆ ಮಾಡಿದ್ದಾರೆ.

ಹತ್ಯೆಗೆ ರಾಜಕೀಯ ವೈಷಮ್ಯ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬರುತ್ತಿದೆ. ತನಿಖೆ ನಡೆಸಿ ಸತ್ಯಾಂಶ ಹೊರಗೆಳೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here