- Advertisement -
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಶಾಸಕರ ಜೊತೆ ಮಹತ್ವದ ಸಭೆ ನಡೆಸಲಿದ್ದಾರೆ.
ನಿಗಮ, ಮಂಡಳಿಗಳ ನೇಮಕಾತಿಯಲ್ಲಿನ ಅಸಮಾಧಾನ, ಸಚಿವ ಸಂಪುಟ ವಿಸ್ತರಣೆಯಲ್ಲಿ ಆಗುತ್ತಿರುವ ವಿಳಂಬ, ಶಾಸಕರಿಗೆ ಅನುದಾನ, ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಕುರಿತು ನಗರದ ಖಾಸಗಿ ಹೊಟೇಲ್‍ನಲ್ಲಿ ಶಾಸಕರೊಂದಿಗೆ ಸಭೆ ನಡೆಸಲು ನಿರ್ಧರಿಸಿದ್ದಾರೆ.
ಇಂದು ಮತ್ತು ನಾಳೆ ಸಿಎಂ ಸಭೆ ನಡೆಸಲಿದ್ದು, ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿ ಶಾಸಕರಿಂದ ಮಾಹಿತಿ ಸಂಗ್ರಹಿಸಲಿದ್ದಾರೆ ಎನ್ನಲಾಗಿದೆ.