ವಿಟ್ಲ: ನಾದಿನಿ ಜೊತೆಗೆ ಸರಸವಾಡಿ ಮತ್ತೆ ಲೈಂಗಿಕ ಕ್ರಿಯೆಗೆ ಒಪ್ಪದೇ ಇದ್ದಲ್ಲಿ ಆಕೆಯ ಅಶ್ಲೀಲ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ ಯುವಕನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯನ್ನು ಪುಣಚ ಲಕ್ಕೋನಿ ನಿವಾಸಿ ಬಶೀರ್ ಎಂದು ಗುರುತಿಸಲಾಗಿದೆ. ಈತ ಕಡಂಬು ಬಳಿಯ ನಿವಾಸಿಯೂ ಮತ್ತು ಹೆಂಡತಿಯ ತಂಗಿಗೆ ಅತ್ಯಾಚಾರ ಮಾಡಿದ್ದಲ್ಲದೇ ಆಕೆಯ ನಗ್ನ ಫೋಟೋಗಳನ್ನೂ ತೆಗೆದಿದ್ದ. ಮತ್ತೆ ಲೈಂಗಿಕ ಕ್ರಿಯೆಗೆ ಒಪ್ಪದೇ ಇದ್ದ ಕಾರಣ ಆಕೆಯ ಫೋಟೋಗಳನ್ನು ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದ. ಪೊಲೀಸರಿಗೆ ದೂರು ನೀಡುವುದಾಗಿ ಹೇಳಿದ ಬಳಿಕ ನಾಪತ್ತೆಯಾಗಿದ್ದ.
ಯುವತಿ ನೀಡಿದ ದೂರಿನ ಆಧಾರದಲ್ಲಿ ಪೊಲೀಸರು ಕಾರ್ಯಪ್ರವೃತ್ತರಾಗಿ ಆರೋಪಿಯನ್ನು ಬಂಧಿಸಿದ್ದಾರೆ.