ಮಾಜಿ ಸಿಎಂ ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಬಾದಾಮಿಯಲ್ಲಿ ಹೇಳಿಕೊಂಡಿದ್ದಾರೆ. ಹಾಗಾದರೆ ಕಾಂಗ್ರೆಸ್‌ನಲ್ಲಿ ಹೇಳೋರು-ಕೇಳೋರು ಯಾರೂ ಇಲ್ವಾ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದ್ದಾರೆ.
ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಸರ್ವಾಧಿಕಾರಿ ಧೋರಣೆ ಹೊಂದಿದ್ದಾರೆ. ಹಾಗಾಗಿ ಪದೇ ಪದೇ ಮುಂದಿನ ಮುಖ್ಯಮಂತ್ರಿ ನಾನೇ ಎಂದು ಹೇಳಿಕೊಳ್ಳುತ್ತಿದ್ದಾರೆ. ಹಿಂದೆ ಇವರೇ ಮುಖ್ಯಮಂತ್ರಿಯಾಗಿದ್ದರು. ಅವರ ಅಧಿಕಾರ ಗಮನಿಸಿಯೇ ಕೆಳಗಿಳಿಸಿದ್ದಾರೆ. ಉಪಚುನಾವಣೆಗಳು, ಗ್ರಾಪಂ ಚುನಾವಣೆ ಸಹಿತ ಎಲ್ಲದರಲ್ಲೂ ಸೋಲು ಅನುಭವಿಸಿದ್ದಾರೆ. ಆದರೂ ಸಿದ್ದರಾಮಯ್ಯನವರಿಗೆ ಬುದ್ಧಿ ಬಂದಿಲ್ಲ ಎಂದರು.
ಈಗಾಗಲೇ ಕಾಂಗ್ರೆಸ್ ನಿರ್ನಾಮವಾಗಿದೆ. ಲೋಕಸಭಾ ಚುನಾವಣೆಯಲ್ಲಿ ಕೇವಲ 1 ಸ್ಥಾನ ಗೆದ್ದಿದ್ದಾರೆ. ಹಾಗಿದ್ದರೂ ಸಿದ್ದರಾಮಯ್ಯ ಹಗಲು ಕನಸು ಕಾಣುತ್ತಿದ್ದಾರೆ. ಮುಖ್ಯಮಂತ್ರಿಯನ್ನು ಶಾಸಕಾಂಗ ಪಕ್ಷದ ಸಭೆಯಲ್ಲಿ ಆರಿಸುತ್ತಾರೆ. ಇವರು ಸ್ವಯಂ ಘೋಷಿತ ನಾಯಕರಾಗಿದ್ದಾರೆ ಎಂದು ಲೇವಡಿ ಮಾಡಿದರು.