ದ.ಕ.ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ನಾಳೆ ಎರಡನೇ ಹಂತದ ಚುನಾವಣೆ
ಮಂಗಳೂರು : ಎರಡನೇ ಹಂತದ ದ.ಕ.ಜಿಲ್ಲೆಯ ನಾಲ್ಕು ತಾಲೂಕಿನ 114 ಗ್ರಾಪಂಗಳಿಗೆ ರವಿವಾರ ಬೆಳಗ್ಗೆ 7ರಿಂದ ಸಂಜೆ 5ರವರೆಗೆ ನಡೆಯಲಿದ್ದು, 3,421 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
ಬೆಳ್ತಂಗಡಿಯ 46, ಪುತ್ತೂರಿನ 22, ಕಡಬದ 21, ಸುಳ್ಯದ 25 ಸಹಿತ 114 ಗ್ರಾಪಂಗಳ 1541 ಸ್ಥಾನಗಳಿಗೆ ಚುನಾವಣೆ ನಡೆಯಬೇಕಿತ್ತು. ಆ ಪೈಕಿ 41 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದ ಕಾರಣ ರವಿವಾರ 1,500 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ಪೈಕಿ ಅನುಸೂಚಿತ ಜಾತಿಯ 371, ಅನುಸೂಚಿತ ಪಂಗಡದ 272, ಹಿಂದುಳಿದ ‘ಅ’ ವರ್ಗದ 699, ಹಿಂದುಳಿದ ‘ಬಿ’ ವರ್ಗದ 138, ಸಾಮಾನ್ಯ 1,921 ಅಭ್ಯರ್ಥಿಗಳು ಸೇರಿದ್ದಾರೆ.