ಬೆಂಗಳೂರು : ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹೈಕೋರ್ಟ್ ಬಿಗ್ ಶಾಕ್ ಕೊಟ್ಟಿದೆ. ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ತನಿಖೆಗೆ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ.
ತಮ್ಮ ಮೇಲೆ ಕೇಳಿಬಂದಿದ್ದ ಆರ್.ಟಿ.ನಗರದ ಗಂಗೇನಹಳ್ಳಿ ವ್ಯಾಪ್ತಿಯ ಮಠದ ಹಳ್ಳಿ ಬಡಾವಣೆಯಲ್ಲಿನ 1 ಎಕರೆ 11 ಗುಂಟೆ ಜಮೀನನ್ನು ಡಿನೋಟಿಫಿಕೇಶನ್ ಮಾಡಲಾಗಿತ್ತು. ಈ ಕುರಿತು ಅಕ್ರಮದ ಆರೋಪ ಕೇಳಿಬಂದಿದ್ದು, ಲೋಕಾಯಕ್ತರು ಪ್ರಕರಣದ ಕುರಿತು ಎಫ್ ಐಆರ್ ದಾಖಲು ಮಾಡಿದ್ದರು. ಈ ಕುರಿತು ಯಡಿಯೂರಪ್ಪ ಪ್ರಕರಣದ ರದ್ದುಕೋರಿ ಹೈಕೋರ್ಟ್ ಮೊರೆ ಹೋಗಿದ್ದರು.
ಪ್ರಕರಣದ ಕುರಿತು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರಿದ್ದ ನ್ಯಾಯಪೀಠ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದು, ನ್ಯಾಯಪೀಠ ಯಡಿಯೂರಪ್ಪ ಅವರಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿದೆ. ಅಲ್ಲದೇ ತನಿಖೆಯನ್ನು ಮುಂದುವರಿಸುವಂತೆ ಲೋಕಾಯುಕ್ತರಿಗೆ ಸೂಚನೆಯನ್ನು ನೀಡಿದೆ