- Advertisement -
(06-01-2021):ಪಾಕ್ ಪರ ಬಿಜೆಪಿ ಕಾರ್ಯಕರ್ತರು ಘೋಷಣೆ ಅಸಲಿ ವಿಡಿಯೋ ವೈರಲ್ ಬಳಿಕ ನೈಜ ಆರೋಪಗಳ ವಿರುದ್ಧ ಕೇಸ್ ದಾಖಲಿಸುವಲ್ಲಿ ಮತ್ತು ಆರೋಪಿಗಳನ್ನು ಬಂಧಿಸುವಲ್ಲಿ ಬೆಳ್ತಂಗಡಿ ಪೊಲೀಸರು ಮೀನಾಮೇಷವನ್ನು ಮಾಡುತ್ತಿದ್ದು, ಘಟನೆಯನ್ನು ಖಂಡಿಸಿ ನೈಜ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಎಸ್ ಡಿಪಿಐ ಕಾರ್ಯಕರ್ತರು ಬೆಳ್ತಂಗಡಿ ಠಾಣೆ ಮುಂಭಾಗ ಧರಣಿ ಕುಲಿತಿದ್ದಾರೆ.ಪ್ರತಿಭಟನೆಯಲ್ಲಿ ಎಸ್ ಡಿಪಿಐ ಹಿರಿಯ ನಾಯಕರಾದ ಆಲ್ಪರನ್ಸೋ ಪ್ರಾಂಕೋ, ಎಸ್ ಡಿಪಿಐ ಜಿಲ್ಲಾಧ್ಯಕ್ಷರು, ಸೇರಿದಂತೆ ನೂರಾರು ಕಾರ್ಯಕರ್ತರು ಭಾಗವಹಿಸಿದ್ದಾರೆ. ಈ ಮೊದಲು ಪಾಕ್ ಪರ ಘೋಷಣೆ ಕೂಗಿದ್ದಾರೆಂಬ ಸುಳ್ಳಾರೋಪದಲ್ಲಿ ಬಂಧಿತ ಅಮಾಯಕ ಯುವಕರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿದ್ದಾರೆ.ಪ್ರತಿಭಟನಾಕಾರರು ಪಾಕ್ ಪರ ಘೋಷಣೆ ಕೂಗಿದ ಆರೋಪಿಗಳನ್ನು ಇಂದು ಸಂಜೆಯೊಳಗೆ ಬಂಧಿಸಬೇಕು. ಸ್ಥಳಕ್ಕೆ ಉನ್ನತ ಅಧಿಕಾರಿಗಳು ಆಗಮಿಸಬೇಕೆಂದು ಆಗ್ರಹಿಸಿದ್ದಾರೆ.
ಬೆಳ್ತಂಗಡಿಯಲ್ಲಿ ನಡೆಯುತ್ತಿರುವ ಠಾಣಾ ಮುತ್ತಿಗೆ
ಪ್ರತಿಭಟನಾಕಾರರ ಪ್ರಮುಖ ಬೇಡಿಕೆಗಳು
1 ಎಸ್ ಡಿ ಪಿ ಐ ಕಾರ್ಯಕರ್ತರ ಮೇಲೆ ದಾಖಲಿಸಿರುವ ಸುಳ್ಳು ಪ್ರಕರಣವನ್ನು ಕೂಡಲೇ ಹಿಂಪಡೆದು ಅಮಾಯಕರನ್ನು ಬಿಡುಗಡೆಗೊಳಿಸಬೇಕು
2 ಪಾಕ್ ಪರ ಘೋಷಣೆ ಕೂಗಿದ ಬಿಜೆಪಿ ಕಾರ್ಯಕರ್ತರ ಮೇಲೆ ಎಫ್ ಐ ಆರ್ ದಾಖಲಿಸಿ ಶೀಘ್ರ ಬಂಧಿಸಬೇಕು ಎಂಬುವುದಾಗಿದೆ.