Saturday, June 3, 2023
HomeUncategorizedಸಿಎಂ ಸ್ಥಾನಕ್ಕೆ ಖರ್ಗೆ ಹೆಸರನ್ನು ತಿರಸ್ಕರಿಸಿದವರ ಹೆಸರನ್ನು ದೇವೇಗೌಡರು ಹೇಳಲಿ: ಸಿದ್ದರಾಮಯ್ಯ ಸವಾಲು

ಸಿಎಂ ಸ್ಥಾನಕ್ಕೆ ಖರ್ಗೆ ಹೆಸರನ್ನು ತಿರಸ್ಕರಿಸಿದವರ ಹೆಸರನ್ನು ದೇವೇಗೌಡರು ಹೇಳಲಿ: ಸಿದ್ದರಾಮಯ್ಯ ಸವಾಲು

- Advertisement -


Renault

Renault
Renault

- Advertisement -

ಮೈಸೂರು :ಮುಖ್ಯಮಂತ್ರಿ ಸ್ಥಾನಕ್ಕೆ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೆಸರು ತಿರಸ್ಕರಿಸಿದ್ದು ನಾನಂತು ಅಲ್ಲ. ಅವರಿಗೆ ಗೊತ್ತಿದ್ದರೆ, ಅವರ ಹೆಸರು ಹೇಳಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ದೇವೇಗೌಡರಿಗೆ ಸವಾಲು ಹಾಕಿದರು.
ಭಾನುವಾರ ಮೈಸೂರು ತಾಲೂಕಿನಲ್ಲಿರುವ ತಮ್ಮ ಸ್ವಗ್ರಾಮವಾದ ಸಿದ್ದರಾಮಯ್ಯನ ಹುಂಡಿಯಲ್ಲಿ ನಡೆದ ಗ್ರಾ.ಪಂ ಚುನಾವಣೆಯಲ್ಲಿ ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮುಖ್ಯಮಂತ್ರಿಯಾಗುವ ಆಗುವ ಅವಕಾಶ ಇತ್ತು, ಆದರೆ ಸಿಎಂ ಸ್ಥಾನಕ್ಕೆ ಖರ್ಗೆ ಅವರ ಹೆಸರನ್ನು ತಿರಸ್ಕರಿಸಲಾಯಿತು ಎಂದು ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ದೇವೇ ಗೌಡ ಹೇಳಿದ್ದಾರೆ. ನಾನಂತು ಖರ್ಗೆ ಹೆಸರು ತಿರಸ್ಕಾರ ಮಾಡಿಲ್ಲ. ಯಾರು ಮಾಡಿದ್ದರು ಅಂತ ನನಗೆ ಗೊತ್ತಿಲ್ಲ. ಅವರಿಗೆ ಗೊತ್ತಿದ್ದರೆ, ಅವರ ಹೆಸರು ಹೇಳಲಿ ಎಂದು ಸಿದ್ದರಾಮಯ್ಯ ಎಂದು ದೇವೇಗೌಡರಿಗೆ ಸವಾಲು ಹಾಕಿದರು.
ಸಿದ್ದರಾಮಯ್ಯ ಜೆಡಿಎಸ್ ಪಕ್ಷ ಕಟ್ಟಿಲ್ಲ ಎಂಬ ದೇವೇಗೌಡರು ಹೇಳಿಕೆ ನೀಡಿದ್ದಾರೆ. ಹಾಗಾದರೆ 1999ರಲ್ಲಿ ಜೆಡಿಎಸ್ ಅಧ್ಯಕ್ಷರಾಗಿದ್ದು ಯಾರು? 6 ವರ್ಷಗಳ ಕಾಲ ಜೆಡಿಎಸ್ ಅಧ್ಯಕ್ಷನಾಗಿದ್ದು ನಾನು, ಹಾಗಾದರೆ ನಾನು ಅಧ್ಯಕ್ಷನಾಗಿದ್ದು ವ್ಯರ್ಥನಾ? ಎಂದು ದೇವೇಗೌಡರಿಗೆ ಪ್ರಶ್ನಿಸಿದರು.
ಡಿ.29ಕ್ಕೆ ಮೈಸೂರಿನಲ್ಲಿ ಕುರುಬರ ಎಸ್‌ಟಿ ಮೀಸಲಾತಿ ಹೋರಾಟ ಸಮಿತಿಯ ಸಭೆ ನಡೆಯುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಕುರುಬ ಸಮುದಾಯ ಎಸ್‌ಟಿಗೆ ಸೇರಿಸುವ ಹೋರಾಟ ಅಗತ್ಯವೇ ಇಲ್ಲ. ಇದು ಕುರುಬರನ್ನ ಇಬ್ಬಾಗ ಮಾಡುವ ಹುನ್ನಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಾನು ಸಿಎಂ ಆಗಿದ್ದಾಗಲೇ ಕುಲಶಾಸ್ತ್ರ ಅಧ್ಯಯನಕ್ಕೆ ಶಿಫಾರಸ್ಸು ಮಾಡಿದ್ದೆ. ಕೆ.ಎಸ್.ಈಶ್ವರಪ್ಪ, ಹೆಚ್. ವಿಶ್ವನಾಥ್ ಇಬ್ಬರು ಬಿಜೆಪಿ ಸರ್ಕಾರದಲ್ಲಿದ್ದಾರೆ. ಅವರು ಕುಲಶಾಸ್ತ್ರ ಅಧ್ಯಯನ ವರದಿ ಪಡೆದು ಕೇಂದ್ರಕ್ಕೆ ಶಿಫಾರಸ್ಸು ಮಾಡಿಸಲಿ ಎಂದರು.
ಜಾತಿ ಗಣತಿ ವರದಿ ಪಡೆಯಲು ಮುಖ್ಯಮಂತ್ರಿಯಾಗಿದ್ದ ಎಚ್.ಡಿ.ಕುಮಾರಸ್ವಾಮಿ ಅಡ್ಡಿಪಡಿಸಿದ್ದರು ಎಂದು ಮಾಜಿ ಸಚಿವ ಪುಟ್ಟರಂಗಶೆಟ್ಟಿ ಹೇಳಿಕೆ ನೀಡಿದ್ದಾರೆ. ಪುಟ್ಟರಂಗಶೆಟ್ಟಿ ಸತ್ಯ ಹೇಳಿದ್ದಾರೆ. ವರದಿ ಸ್ವೀಕಾರ ಮಾಡದಂತೆ ಹೆಚ್.ಡಿ.ಕುಮಾರಸ್ವಾಮಿ ಹೆದರಿಸಿದ್ದರು. ಕುಮಾರಸ್ವಾಮಿ ಯಾಕೇ ವರದಿ ಪಡೆಯಲು ಹಿಂದೇಟು ಹಾಕಿದ್ರು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

- Advertisement -

LEAVE A REPLY

Please enter your comment!
Please enter your name here

Most Popular

Recent Comments