ಮಂಗಳೂರು; ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 37 ಮಂದಿಗೆ ಕೋವಿಡ್ ಸೋಂಕು ದೃಢ ಪಟ್ಟಿದೆ. 7 ಮಂದಿ ಗುಣಮುಖರಾಗಿದ್ದಾರೆ.
ಗುರುವಾರ ಜಿಲ್ಲೆಯಲ್ಲಿ ಕೋವಿಡ್ ಸಾವು ಸಂಭವಿಸಿಲ್ಲ. ಈ ತನಕ ಜಿಲ್ಲೆಯಲ್ಲಿ 732 ಮಂದಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದಾರೆ.
ದಕ್ಷಿಣ ಕನ್ನಡದಲ್ಲಿ 395 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಈವರೆಗೆ 31,960 ಮಂದಿ ಸೋಂಕು ಮುಕ್ತರಾಗಿದ್ದಾರೆ. 21,096ಮಾಸ್ಕ್ ಉಲ್ಲಂಘನೆ ಪ್ರಕರಣಗಳು ದಾಖಲಾಗಿವೆ. ರೂ. 22,39,804 ದಂಡ ವಸೂಲಿ ಮಾಡಲಾಗಿದೆ