ಡಿಸೆಂಬರ್ 31ರ ಸಂಜೆ 6 ರಿಂದ ಜನವರಿ 1ರ ಬೆಳಗ್ಗೆ 6 ರವರೆಗೆ ಬೆಂಗಳೂರು ನಗರದಲ್ಲಿ ಸೆಕ್ಷನ್ 144 ಜಾರಿ ಮಾಡಲಾಗುತ್ತಿದೆ.ಈ ಬಗ್ಗೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ನೀಡಿದ್ದಾರೆ. ಬೆಂಗಳೂರಿನ ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್, ಬ್ರಿಗೇಡ್ ರಸ್ತೆ, ಕೋರಮಂಗಲ, ಇಂದಿರಾನಗರಗಳಲ್ಲಿ ‘ನೋ ಮ್ಯಾನ್’ ವಲಯಗಳನ್ನು ಸೃಷ್ಟಿಸಲಾಗಿದೆ. ಪಬ್, ಬಾರ್, ರೆಸ್ಟೋರೆಂಟ್‌ಗಳಿಗೆ ಮುಂಗಡ ಕಾಯ್ದಿರಿಸುವ ಕೂಪನ್ ಗಳನ್ನು ಹೊಂದಿರುವವರಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಅವರು ಹೇಳಿದ್ದಾರೆ.ರಾಜ್ಯದಲ್ಲಿ ಕೊರೊನಾ ಹೊಸ ತಳಿಯ ಆತಂಕ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಹೊಸ ವರ್ಷಾಚರಣೆಗೆ ಅವಕಾಶ ಇಲ್ಲ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಕೂಡಾ ಹೇಳಿದ್ದಾರೆ.