ಸುಳ್ಯ: ಸಜ್ಜನಿಕೆಯ ರಾಜಕಾರಣಿ ಎಂದೇ ಗುರುತಿಸಿಕೊಂಡಿರುವ ಸುಳ್ಯ ಶಾಸಕ ಎಸ್. ಅಂಗಾರ ಸಚಿವರಾದ ಹಿನ್ನೆಲೆಯಲ್ಲಿ ಸುಳ್ಯದಲ್ಲಿ ಅಭೂತಪೂರ್ವ ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಅಂಗಾರ ಅವರನ್ನು ಹೂ-ಹಾರ ಶಾಲು ಹೊದಿಸಿ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು. ಸಾರ್ವಜನಿಕರಲ್ಲೂ ಬಹುತೇಕ ಮಂದಿ ಸ್ಥಳೀಯರು, ಉದ್ಯಮಿಗಳು, ರಾಜಕೀಯ ಮುಖಂಡರು ಹೂ-ಹಾರದೊಂದಿಗೆ ಅಭಿನಂದನೆ ಸಲ್ಲಿಸಿದರು.
ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಶಾಸಕರಾದ ವೇದವ್ಯಾಸ ಕಾಮತ್, ರಾಜೇಶ್ ನ್ಯಾಕ್ ಉಳೆಪಾಡಿ, ಹರೀಶ್ ಪೂಂಜಾ, ವೈ ಭರತ್ ಶೆಟ್ಟಿ, ಬಿಜೆಪಿ ಯುವ ನಾಯಕ ಸುಕೇಶ್ ಭಂಡಾರಿ, ರಾಜಕೀಯ ಮುಖಂಡರಾದ ಎಂ.ಬಿ. ಸದಾಶಿವ ಸೇರಿದಂತೆ ಜಿಲ್ಲೆಯ ಮುಖಂಡರು ಪಕ್ಷ ಬೇಧವಿಲ್ಲದೇ ಈ ಸಂಭ್ರಮದಲ್ಲಿ ಭಾಗವಹಿದ್ದರು.