Tuesday, April 20, 2021
HomeರಾಜಕೀಯVIDEO:ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಬೈರತಿ ಬಸವರಾಜು ಭೇಟಿ…!!!

VIDEO:ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಬೈರತಿ ಬಸವರಾಜು ಭೇಟಿ…!!!

ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಚಿವ ಬೈರತಿ ಬಸವರಾಜು ಭೇಟಿ…!!!

ಸುಬ್ರಹ್ಮಣ್ಯ: ಮಾಧ್ಯಮಗಳು ತಮ್ಮ ವಿರುದ್ಧ ವರದಿಯನ್ನು ಬಿತ್ತರಿಸಬಾರದೆಂದು ನ್ಯಾಯಾಲಯದ ಮೊರೆ ಹೋದ ಆರು ಜನ ಸಚಿವರ ತಂಡದಲ್ಲಿರುವ ಕರ್ನಾಟಕ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಅವರು ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದರು.

https://youtu.be/YmX6swEKyjk

ಮಧ್ಯಾಹ್ನ ವೇಳೆಗೆ ಕುಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಚಿವರು ಸಾಯಂಕಾಲ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವರಿಗೆ ಪೂಜೆ ಸಲ್ಲಿಸಿ,ದೇವರ ದರ್ಶನ ಪಡೆದರು.ಮೀನುಗಾರಿಕೆ ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರರವರು ಸಚಿವ ಭೈರತಿ ಬಸವರಾಜು ಅವರನ್ನು ಸ್ವಾಗತಿಸಿದರು. ದೇವರ ದರ್ಶನ ಪಡೆದು ಹೊರಗಡೆ ಬಂದ ಸಚಿವರನ್ನು ಮಾತನಾಡಿಸಲು ಮಾಧ್ಯಮ ಪ್ರತಿನಿಧಿಗಳು ಪ್ರಯತ್ನ ಮಾಡಿದರೂ ಯಾವುದೇ ಮಾತು ಹೇಳದೇ ಧರ್ಮಸ್ಥಳದ ಕಡೆಗೆ ಪ್ರಯಾಣ ಬೆಳೆಸಿದರು. ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದರ್ಶನ ಮಾಡಲಿರುವ ಸಚಿವರು ಅಲ್ಲೇ ವಾಸ್ತವ್ಯ ಹೂಡಿ ನಾಳೆ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿಯ ದರ್ಶನ ಪಡೆಯಲಿದ್ದಾರೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments