- Advertisement -
ಬೆಂಗಳೂರು : ಪದೇ ಪದೇ ಖಾತೆ ಅದಲು-ಬದಲು ಮಾಡುತ್ತಿರುವುದರಿಂದ ಬೇಸರಗೊಂಡಿರುವಂತ ಸಿಎಂ ಯಡಿಯೂರಪ್ಪ ವಿರುದ್ಧ ಅಸಮಾಧಾನಗೊಂಡಿರುವಂತ ಸಚಿವ ಮಾಧುಸ್ವಾಮಿ, ನಾಳೆ ಮಧ್ಯಾಹ್ನ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ.
ಈ ಕುರಿತಂತೆ ಮಾತನಾಡಿರುವಂತ ಅವರು, ಜನವರಿ 26ರ ಗಣರಾಜ್ಯೋತ್ಸವದ ದಿನವಾದ ನಾಳೆ, ಗಣರಾಜ್ಯೋತ್ಸವ ಧ್ವಜಾರೋಹಣ ನೆರವೇರಿಸಿದ ಬಳಿಕ, ಸಚಿವ ಸ್ಥಾನಕ್ಕೆ ತಾವು ರಾಜೀನಾಮೆ ನೀಡುತ್ತೇನೆ. ಅದನ್ನು ಅಂಗೀಕರಿಸೋದು, ಸಿಎಂ ಯಡಿಯೂರಪ್ಪ ಅವರ ನಿರ್ಧಾರಕ್ಕೆ ಬಿಟ್ಟದ್ದು ಎಂಬುದಾಗಿ ತಿಳಿಸಿದ್ದಾರೆ.