Friday, October 7, 2022
HomeUncategorizedಹೊಕ್ಕಾಡಿಗೋಳಿಯಲ್ಲಿ ಕೊರೋನಾ ನಂತರ ಮೊದಲ ಕಂಬಳ: ಫುಲ್ ರಶ್

ಹೊಕ್ಕಾಡಿಗೋಳಿಯಲ್ಲಿ ಕೊರೋನಾ ನಂತರ ಮೊದಲ ಕಂಬಳ: ಫುಲ್ ರಶ್

- Advertisement -
Renault

Renault

Renault

- Advertisement -

ಬಂಟ್ವಾಳ: ಕೊರೊನಾ ಕಾರಣದಿಂದಾಗಿ ಸ್ಥಗಿತಗೊಂಡಿದ್ದ ತುಳುನಾಡಿನ ಸಾಂಪ್ರದಾಯಿಕ ಕ್ರೀಡೆ ಕಂಬಳ ಹೊಕ್ಕಾಡಿಗೋಳಿಯಲ್ಲಿ ನಡೆಯುವ ಮೂಲಕ ಮತ್ತೆ ಪುನರಾರಂಭಗೊಂಡಿದೆ.

ಜಿಲ್ಲೆಯಲ್ಲಿ ಹಲವು ವರ್ಷಗಳ ಇತಿಹಾಸ ಹೊಂದಿರುವ ಹೊಕ್ಕಾಡಿಗೋಳಿ ‘ವೀರ-ವಿಕ್ರಮ’ ಜೋಡುಕರೆ ಕಂಬಳ ಕೊರೊನಾ ನಂತರ ಆರಂಭವಾದ ಮೊದಲ ಕಂಬಳ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಶನಿವಾರ ಹೊಕ್ಕಾಡಿಗೋಳಿಯಲ್ಲಿ ಕಂಬಳಕ್ಕೆ ಚಾಲನೆ ದೊರೆತಿದೆ. ಸಿದ್ದಕಟ್ಟೆ ಸಮೀಪದ ಹೊಕ್ಕಾಡಿಗೋಳಿಯಲ್ಲಿ ಇತಿಹಾಸ ಪ್ರಸಿದ್ದ ‘ವೀರ -ವಿಕ್ರಮ’ ಜೋಡುಕರೆ ಬಯಲು ಕಂಬಳಕ್ಕೆ ಶನಿವಾರ ಬೆಳಿಗ್ಗೆ ಚಾಲನೆ ನೀಡಿದ ಪೂಂಜ ಕ್ಷೇತ್ರದ ಅಸ್ರಣ್ಣ ಕೃಷ್ಣಪ್ರಸಾದ್ ಆಚಾರ್ಯ, ಹೊಕ್ಕಾಡಿಗೋಳಿ ಕಂಬಳಕ್ಕೆ ಧಾರ್ಮಿಕವಾಗಿ ವಿಶೇಷ ನಂಟು ಮತ್ತು ದೈವ ದೇವರ ಕೃಪೆಯೂ ಇದೆ ಎಂದು ಹೇಳಿದರು.

ಕಂಬಳ ಸಮಿತಿ ಅಧ್ಯಕ್ಷ ನೋಣಾಲ್ ಗುತ್ತು ರಶ್ಮಿತ್ ಶೆಟ್ಟಿ ಕೈತ್ರೋಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಸ್ಥಳೀಯ ವೈದ್ಯ ಡಾ.ಸುದೀಪ್ ಕುಮಾರ್ ಜೈನ್ ಮಾತನಾಡಿ, ಕಂಬಳ ಕ್ರೀಡೆಯು ತುಳುನಾಡಿನ ಸಂಸ್ಕೃತಿ ಮೆರೆಯುತ್ತಿದೆ ಎಂದರು. ಎಪಿಎಂಸಿ ಮಾಜಿ ನಿರ್ದೇಶಕ ರತ್ನಕುಮಾರ್ ಚೌಟ, ಹೊಸಂಗಡಿ ತಾ.ಪಂ.ಸದಸ್ಯ ಓಬಯ, ಆರಂಬೋಡಿ ಗ್ರಾ.ಪಂ.ಅಧ್ಯಕ್ಷ ಪ್ರಭಾಕರ ಹುಲಿಮೇರು, ಜಿಲ್ಲಾ ಕಂಬಳ ಸಮಿತಿ ಪ್ರಧಾನ ಕಾರ್ಯದರ್ಶಿ ಎಡ್ತೂರು ರಾಜೀವ ಶೆಟ್ಟಿ, ಕಂಬಳ ಸಮಿತಿ ಗೌರವಾಧ್ಯಕ್ಷ ಸಂಜೀವ ಶೆಟ್ಟಿ ಗುಂಡ್ಯಾರು, ಗೌರವ ಸಲಹೆಗಾರರಾದ ವಕೀಲ ಸುರೇಶ ಶೆಟ್ಟಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಕಂಬಳ ಸಮಿತಿ ಗೌರವ ಸಲಹೆಗಾರ ಸುರೇಶ ಶೆಟ್ಟಿ ಸ್ವಾಗತಿಸಿ, ವಂದಿಸಿದರು. ಪ್ರಚಾರ ಸಮಿತಿ ಸಂಚಾಲಕ ಮೋಹನ್ ಕೆ.ಶ್ರೀಯಾನ್ ರಾಯಿ ಕಾರ್ಯಕ್ರಮ ನಿರೂಪಿಸಿದರು.

- Advertisement -


LEAVE A REPLY

Please enter your comment!
Please enter your name here

Most Popular

Recent Comments