Monday, January 17, 2022
Homeಕರಾವಳಿರೈತರ ಬೆಳೆ ಸಮೀಕ್ಷೆ ನಡೆಸಲು ನೂತನ ಕೃಷಿ ಆ್ಯಪ್ ಬಿಡುಗಡೆ

ರೈತರ ಬೆಳೆ ಸಮೀಕ್ಷೆ ನಡೆಸಲು ನೂತನ ಕೃಷಿ ಆ್ಯಪ್ ಬಿಡುಗಡೆ

- Advertisement -
Renault


- Advertisement -

ಮಂಗಳೂರು : ಕಾವೂರಿನಲ್ಲಿ ಕೃಷಿ ಇಲಾಖೆ ಆಯೋಜಿಸಿದ್ದ ರೈತರ ಬೆಳೆ ಸಮೀಕ್ಷೆ ನಡೆಸಲು ಅನುಕೂಲವಾಗುವಂತೆ ರಾಜ್ಯ ಸರ್ಕಾರ ಅಭಿವೃದ್ಧಿ ಪಡಿಸಿದ ನೂತನ ಆ್ಯಪ್ ಬಿಡುಗಡೆ ಕಾರ್ಯಕ್ರಮದಲ್ಲಿ ಶಾಸಕ ಡಾ.ಭರತ್ ಶೆಟ್ಟಿ ವೈ ಭಾಗವಹಿಸಿ ಮಾತನಾಡಿ, ರೈತರ ಬೆಳೆ ಸಮೀಕ್ಷೆ ನಡೆಸಲು, ಹಾನಿಯಾದಲ್ಲಿ ಪರಿಹಾರ ಪಡೆಯಲು ಅನುಕೂಲವಾಗುವಂತೆ ದಾಖಲೀಕರಣಕ್ಕೆ ಸರಕಾರ ಕೃಷಿ ಆ್ಯಪ್ ಸಿದ್ಧಪಡಿಸಿದೆ. ಕೃಷಿ ಇಲಾಖೆಯ ಅಧಿಕಾರಿಗಳು ಗ್ರಾಮ ಮಟ್ಟದಲ್ಲಿ ರೈತರಿಗೆ ಮಾಹಿತಿ ನೀಡುವ ಮೂಲಕ ಇದರ ಸದುಪಯೋಗ ಪಡೆದುಕೊಳ್ಳಬೇಕಾಗಿದೆ ಎಂದು ಹೇಳಿದರು.

ಶಾಸಕರಾದ ಡಾ.ಭರತ್ ಶೆಟ್ಟಿ ವೈ ಆಪ್ ಬಗ್ಗೆ ಮಾಹಿತಿ ನೀಡುತ್ತಾ, ಈ ಆ್ಯಪ್‌ ನಲ್ಲಿ ಮಾಹಿತಿ ನೀಡಿದರೆ ಆರ್ ಟಿಸಿಯಲ್ಲಿ ದಾಖಲೀಕರಣಗೊಂಡು ಅನಿರೀಕ್ಷಿತವಾಗಿ ಮಳೆ ಹಾನಿ ಸಂಭವಿಸಿದಲ್ಲಿ ರೈತರು ಪರಿಹಾರ, ಸಾಲ ಸೌಲಭ್ಯ ಮತ್ತಿತರ ಪ್ರಯೋಜನ ಪಡೆಯಬಹುದಾಗಿದೆ. ವಿವಿಧ ಇಲಾಖೆಗಳ ಅಡಿಯಲ್ಲಿ ಈ ಆ್ಯಪ್‍ನಲ್ಲಿ ಇರುವ ಮಾಹಿತಿ ರವಾನೆಯಾಗಿ ದಾಖಲೆಯಾಗಿ ಇದನ್ನು ಬಳಸಿಕೊಳ್ಳಲಾಗುತ್ತದೆ. ರೈತರು ಸ್ವಯಂ ಆಗಿ ಇದನ್ನು ಉಪಯೋಗಿಸಿಕೊಂಡು ಸೌಲಭ್ಯ ಪಡೆಯಬಹುದು’ ಎಂದರು. ಕೃಷಿಕರು ಮತ್ತು ಕೃಷಿ ಇಲಾಖೆ ನಡುವೆ ಉತ್ತಮ ಬಾಂಧವ್ಯ ವೃದ್ಧಿಸಲು ರಾಜ್ಯ ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದಲ್ಲಿ ರೈತ ಬೆಳೆ ಸಮೀಕ್ಷೆ ಆ್ಯಪ್‌ ಅನ್ನು ಅಭಿವೃದ್ಧಿ ಪಡಿಸಲಾಗಿದೆ.

ಈ ಕಾರ್ಯಕ್ರಮದಲ್ಲಿ ಉಪಮೇಯರ್ ಸುಮಂಗಳ ರಾವ್, ರಣ್‍ದೀಪ್ ಕಾಂಚನ್, ಕೃಷಿ ಅಧಿಕಾರಿ ಬಶೀರ್ ಅಹ್ಮದ್, ಬಿಜೆಪಿ ಸ್ಥಳೀಯ ಮುಖಂಡರಾದ ಶಿತೇಶ್ ಕೊಂಡೆ, ಶಾನ್ವಾಜ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

- Advertisement -Home Plus


LEAVE A REPLY

Please enter your comment!
Please enter your name here

- Advertisment -

Most Popular

Recent Comments