Tuesday, September 28, 2021
Homeರಾಜಕೀಯಹೊಸ ಮುಖ್ಯಮಂತ್ರಿಗಳಿಂದ ಮೊದಲ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳ ಮಾಹಿತಿ

ಹೊಸ ಮುಖ್ಯಮಂತ್ರಿಗಳಿಂದ ಮೊದಲ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಣಯಗಳ ಮಾಹಿತಿ

- Advertisement -
Renault
- Advertisement -
Home Plus
- Advertisement -

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಬಸವರಾಜ ಬೊಮ್ಮಾಯಿ ಸಂಪುಟ ಸಭೆ ನಡೆಸಿದ್ದು, ಹಲವಾರು ನಿರ್ಣಯಗಳನ್ನು ಕೈಗೊಂಡಿದ್ದಾರೆ. ರೈತರ ಮಕ್ಕಳ ಉನ್ನತಿಯ ಬಗ್ಗೆ ಚಿಂತನೆ, ಬಡವರಿಗೆ ಸಹಾಯ ನನ್ನ ಸರ್ಕಾರದ ಆದ್ಯತೆಯಾಗಿದೆ. ಈ ನಿಟ್ಟಿನಲ್ಲಿ ನನ್ನ ಚಿಂತನೆಯ ಮೊದಲ ಹೆಜ್ಜೆಯನ್ನು ಸಚಿವ ಸಂಪುಟದ ನಿರ್ಣಯದಲ್ಲಿ ಇಡಲಾಗಿದ್ದು, ಜನಕಲ್ಯಾಣ, ಬಡವ, ದೀನದಲಿತರ ಪರವಾಗಿ ಸರ್ಕಾರ ನಿಲ್ಲಲಿದೆ ಎಂದು ನೂತನ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ, ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದ್ದು, ವಿಶ್ವಾಸಾರ್ಹ, ಜವಾಬ್ದಾರಿಯುತ, ಪಾರದರ್ಶಕ ಹಾಗೂ ದಕ್ಷ ಆಡಳಿತ ನೀಡಲು ತಂಡ ಸ್ಫೂರ್ತಿಯಿಂದ ಕೆಲಸ ಮಾಡಬೇಕು. ಜೊತೆಗೆ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಈ ಕುರಿತು ಮತ್ತೊಮ್ಮೆ ವಿವರವಾಗಿ ಚರ್ಚಿಸಿ, ಗೊಂದಲ ನಿವಾರಣೆಗೆ ಮಾರ್ಗಸೂಚಿಗಳನ್ನು ರೂಪಿಸಲಾಗುವುದು ಎಂದರು.
ಕೊರೋನಾ ಸಂದರ್ಭದಲ್ಲಿ ಆರ್ಥಿಕ ಶಿಸ್ತು ತರಲು ಮಾರ್ಚ್ 31ರ ಒಳಗೆ ಎಲ್ಲಾ ಇಲಾಖೆಗಳಲ್ಲಿ ಅನವಶ್ಯಕ ಖರ್ಚು ಶೇ.5ರಷ್ಟು ಕಡಿಮೆ ಮಾಡಲು ಸೂಚನೆ ನೀಡಲಾಗಿದೆ. ಇಲಾಖೆಗಳ ಕಾರ್ಯನಿರ್ವಹಣೆಗೆ ಶ್ರೇಯಾಂಕ ನೀಡುವ ಮೂಲಕ ದಕ್ಷತೆಯಿಂದ ಕಾರ್ಯನಿರ್ವಹಿಸುವ ಇಲಾಖೆಗಳಿಗೆ ಉತ್ತೇಜನ ನೀಡಲಾಗುವುದು. ಕೋವಿಡ್ ನಿಯಂತ್ರಣ ಹಾಗೂ ಲಸಿಕಾ ಅಭಿಯಾನಕ್ಕೆ ಪ್ರಾಶಸ್ತ್ಯ ನೀಡಲಾಗುವುದು ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

ಸರ್ಕಾರದ ಆಡಳಿತ ಒಂದು ನಿರಂತರ ಪ್ರಕ್ರಿಯೆ. ಅದು ಎಂತಹ ಪರಿಸ್ಥಿತಿಯಲ್ಲೂ ಅನಿರ್ಬಂಧಿತವಾಗಿ ಕಾರ್ಯನಿರ್ವಹಿಸಬೇಕು. ರಾಜ್ಯದ ಜನತೆಗೆ ದಕ್ಷ, ಪ್ರಾಮಾಣಿಕ ಹಾಗೂ ಜನಪರ ಆಡಳಿತ ಕೊಡುವ ದಿಟ್ಟ ತೀರ್ಮಾನ ಕೈಗೊಂಡಿದ್ದೇನೆ. ಇದನ್ನು ಅನುಷ್ಠಾನ ಮಾಡುವುದು ಎಷ್ಟು ಕಷ್ಟ ಎಂಬುದನ್ನು ಅರಿತೇ ಈ ಮಾತನ್ನಾಡುತ್ತಿದ್ದೇನೆ. ಸಚಿವ ಸಂಪುಟದ ನಿರ್ಣಯಗಳು ಕಾಲಮಿತಿಯಲ್ಲಿ ಅನುಷ್ಠಾನಗೊಳ್ಳಬೇಕು. ವಿಳಂಬವಾದಲ್ಲಿ ಭ್ರಷ್ಟಾಚಾರಕ್ಕೆ ಅವಕಾಶವಾಗುತ್ತದೆ. ಆಡಳಿತದಲ್ಲಿ ವಿಳಂಬ ಧೋರಣೆ ಕ್ಯಾನ್ಸರ್ ಇದ್ದಂತೆ. ಆದ್ದರಿಂದ ಸರ್ಕಾರದ ನಿರ್ಣಯಗಳು ನಿಗದಿತ ಕಾಲಮಿತಿಯಲ್ಲಿ ಕಾರ್ಯರೂಪಕ್ಕೆ ಬರಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು. ಎಲ್ಲಿ ಅಧಿಕಾರಿಗಳು ತಮ್ಮ ತಮ್ಮ ಇಲಾಖೆಯ ಕಾರ್ಯಚಟುವಟಿಕೆಗಳು, ನೀತಿ, ನಿಯಮಾವಳಿಗಳು, ಮಾರ್ಗಸೂಚಿಗಳ ಬಗ್ಗೆ ಸ್ಪಷ್ಟತೆಯನ್ನು ಹೊಂದಿರಬೇಕು. ಒಳ್ಳೆಯ ಕೆಲಸಗಳನ್ನು ಯಾವುದೇ ಹಿಂಜರಿಕೆಯಿಲ್ಲದೆ ಧೈರ್ಯದಿಂದ ಮಾಡಿ. ನನ್ನ ಸರ್ಕಾರ ನಿಮ್ಮೊಂದಿಗೆ ಇರುತ್ತದೆ ಎಂದು ತಿಳಿಸಿದ ಸಿಎಂ, ಪ್ರಸ್ತುತ ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿ ಎದುರಿಸುವುದು ಹಾಗೂ ಕೋವಿಡ್ ನಿಯಂತ್ರಣ ಹಾಗೂ ನಿರ್ವಹಣೆ ನಮ್ಮ ಆದ್ಯತೆಯಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಪ್ರತಿ ಇಲಾಖೆಯಲ್ಲಿ ವರ್ಷಾಂತ್ಯದ ವೇಳೆಗೆ ಶೇ.5ರಷ್ಟು ಅನಗತ್ಯ ವೆಚ್ಚಗಳನ್ನು ಕಡಿತಗೊಳಿಸಬೇಕು. ಈ ಕುರಿತು ಮಾರ್ಗಸೂಚಿಗಳನ್ನು ಹೊರಡಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಿದರು. ಇಲಾಖೆಗಳ ಕಾರ್ಯನಿರ್ವಹಣೆಗೆ ಶ್ರೇಯಾಂಕ ನೀಡುವ ಮೂಲಕ ದಕ್ಷತೆಯಿಂದ ಕಾರ್ಯನಿರ್ವಹಿಸುವ ಇಲಾಖೆಗಳಿಗೆ ಉತ್ತೇಜನ ನೀಡಲಾಗುವುದು ಎಂದರು.

ಪ್ರವಾಹ ಪೀಡಿತ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದು, ರಾಜ್ಯದ ಇತಿಹಾಸದಲ್ಲೇ ಛಾಪು ಮೂಡಿಸುವಂತಹ ಉತ್ತಮ ಆಡಳಿತ ನೀಡುವ ವಿಶ್ವಾಸ ವ್ಯಕ್ತಪಡಿಸಿದ ಸಿಎಂ, ಪ್ರಧಾನಿಗಳ ಸಮಯ ನಿಗದಿಯಾದ ಕೂಡಲೇ ದೆಹಲಿಗೆ ತೆರಳಿ ಹೈಕಮಾಂಡ್ ಭೇಟಿ ಮಾಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದರು

ಸಚಿವ ಸಂಪುಟದಲ್ಲಿ ಕೈಗೊಂಡ ನಿರ್ಣಯಗಳು:

  • ರೈತರ ಮಕ್ಕಳಿಗೆ ಅವರ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡಲು ಮತ್ತು ವಿದ್ಯೆಯಿಂದ ವಂಚಿತರಾಗಬಾರದೆಂಬ ಉದ್ದೇಶಕ್ಕೆ ಹೊಸ ಶಿಷ್ಯ ವೇತನ ಯೋಜನೆ ಜಾರಿಗೊಳಿಸುತ್ತಿದ್ದು, ಇದಕ್ಕಾಗಿ ಸರ್ಕಾರ 1 ಸಾವಿರ ಕೋಟಿ ಹಣ ಮೀಸಲಿಟ್ಟಿದೆ
  • ಈಗಾಗಲೇ ಜಾರಿಯಲ್ಲಿರುವ ಸಂಧ್ಯಾ ಸುರಕ್ಷಾ ಯೋಜನೆಯಡಿ ಪಿಂಚಣಿಯನ್ನು ತಿಂಗಳಿಗೆ 1200 ರೂಪಾಯಿಗಳಿಗೆ ಏರಿಕೆ ಮಾಡುತ್ತಿದ್ದು ಇದರಿಂದ 35 ಲಕ್ಷ ಫಲಾನುಭವಿಗಳಿಗೆ ಲಾಭ ಉಂಟಾಗಲಿದೆ. ಸರ್ಕಾರಕ್ಕೆ 863 ಕೋಟಿ ರೂಪಾಯಿ ಹೆಚ್ಚು ಖರ್ಚಾಗಲಿದೆ
  • ವಿಧವಾ ವೇತನವನ್ನೂ 600 ರಿಂದ 800 ರೂಪಾಯಿಗಳಿಗೆ ಏರಿಕೆ ಮಾಡಲಾಗಿದ್ದು, 17.25 ಲಕ್ಷ ಫಲಾನುಭವಿಗಳಿಗೆ ಪ್ರಯೋಜನವಾಗಲಿದೆ ಹಾಗೂ 414 ಕೋಟಿ ಹೆಚ್ಚುವರಿ ವೆಚ್ಚವಾಗಲಿದೆ
  • ಶೇ.40-70 ಅಂಗವೈಕಲ್ಯವಿರುವವರಿಗೆ ಮಾಸಿಕವಾಗಿ ಈಗ ನೀಡಲಾಗುತ್ತಿರುವ 600 ರೂಪಾಯಿಗಳ ವೇತನವನ್ನು 800 ರೂಗೆ ಏರಿಕೆ ಮಾಡಲಾಗಿದ್ದು, 3.66 ಸಾವಿರ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆಯಲಿದ್ದಾರೆ. ಇದರಿಂದ ಸರ್ಕಾರದ ಬೊಕ್ಕಸಕ್ಕೆ 90 ಕೋಟಿ ಹೆಚ್ಚು ವೆಚ್ಚವಾಗಲಿದೆ
- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments