- Advertisement -
ಪುತ್ತೂರು: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಲವು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪುತ್ತೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಕುಖ್ಯಾತ ಕಳ್ಳ ಆರೋಪಿ ಅಶ್ರಫ್ ತಾರಿಗುಡ್ಡೆ(40) ಪುತ್ತೂರು ಪೊಲೀಸರ ಬಲೆಗೆ ಬಿದ್ದಿದ್ದಾನೆ. ಕೇರಳ ಹಾಗೂ ಕರ್ನಾಟಕದ ಕರಾವಳಿ ಭಾಗದಲ್ಲಿ ಒಟ್ಟು 18 ಪ್ರಕರಣಗಳು ಈತನ ಮೇಲಿದ್ದು, ತಲೆಮರೆಸಿಕೊಂಡಿದ್ದ. ಇದೀಗ ಪುತ್ತೂರು ಗ್ರಾಮಾಂತರ ಠಾಣಾ ಎಸ್ಐ ನೇತೃತ್ವದ ತಂಡ ಕೇರಳದ ಮಲಪ್ಪುರಂನಿಂದ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.