Monday, September 26, 2022
Homeಕರಾವಳಿನಾಲ್ಕು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು: ಆತಂಕ ಸೃಷ್ಟಿ

ನಾಲ್ಕು ನರ್ಸಿಂಗ್ ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು: ಆತಂಕ ಸೃಷ್ಟಿ

- Advertisement -
Renault

Renault

Renault

Renault






- Advertisement -

ಮಂಗಳೂರು : ಕಾಲೇಜು ಪುನರಾರಂಭದ ಬೆನ್ನಲ್ಲೇ ಮಂಗಳೂರಲ್ಲಿ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಇದೀಗ ಮಂಗಳೂರಿನ ಶ್ರೀನಿವಾಸ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸ್ ಕಾಲೇಜಿನ 4 ಮಂದಿ ವಿದ್ಯಾರ್ಥಿನಿಯರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಎಲ್ಲಾ ವಿದ್ಯಾರ್ಥಿನಿಯರು ಕೂಡ ಕೇರಳದವರು ಎಂದು ತಿಳಿದು ಬಂದಿದೆ. ಕೊರೊನಾ ವೈರಸ್ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಪರೀಕ್ಷಾ ವರದಿಯಲ್ಲಿ ವಿದ್ಯಾರ್ಥಿನಿಯರಿಗೆ ಕೊರೊನಾ ವೈರಸ್ ಸೋಂಕು ಇರೋದು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯರನ್ನು ಐಸೋಲೇಷನ್ ಗೆ ಒಳಪಡಿಸಲಾಗಿದೆ.

ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ರಾಮಚಂದ್ರ ಬಾಯರಿ ಅವರು ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಕೊರೊನಾ ಸೋಂಕಿತ ವಿದ್ಯಾರ್ಥಿಗಳ ಜೊತೆಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ ಎಲ್ಲಾ ವಿದ್ಯಾರ್ಥಿಗಳನ್ನು ಕೂಡ 14 ದಿನಗಳ ಕಾಲ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ ಎಂದು ತಿಳಿಸಿದ್ದಾರೆ.

- Advertisement -






LEAVE A REPLY

Please enter your comment!
Please enter your name here

- Advertisment -

Most Popular

Recent Comments