Monday, May 16, 2022
HomeUncategorizedಆರೋಗ್ಯರಾಜ್ಯದಲ್ಲಿ ಒಮಿಕ್ರಾನ್‌ ಸ್ಫೋಟ ; 287 ಹೊಸ ಕೇಸ್ ಪತ್ತ, ಸೊಂಕಿತರ ಸಂಖ್ಯೆ 766ಕ್ಕೆ ಏರಿಕೆ

ರಾಜ್ಯದಲ್ಲಿ ಒಮಿಕ್ರಾನ್‌ ಸ್ಫೋಟ ; 287 ಹೊಸ ಕೇಸ್ ಪತ್ತ, ಸೊಂಕಿತರ ಸಂಖ್ಯೆ 766ಕ್ಕೆ ಏರಿಕೆ

- Advertisement -
Renault







- Advertisement -

ಬೆಂಗಳೂರು : ರಾಜ್ಯದಲ್ಲಿ ದಿನೇ ದಿನೇ ಕೊರೊನಾ ಪ್ರಕರಣ(Corona virus)ಗಳ ಸಂಖ್ಯೆ ಹೆಚ್ಚಳವಾಗ್ತಿವೆ. ಈ ನಡುವೆ ಒಮಿಕ್ರಾನ್‌(OmiCron) ಆತಂಕವೂ ಶುರುವಾಗಿದೆ. ಅಂದ್ಹಾಗೆ, ರಾಜ್ಯದಲ್ಲಿ ಇಂದು ಅಕ್ಷರಶಃ ಒಮಿಕ್ರಾನ್‌ ಸ್ಪೋಟವಾಗಿದ್ದು, ಬರೋಬ್ಬರಿ 287 ಮಂದಿಗೆ ಹೊಸ ವೈರಸ್‌ ವಕ್ಕರಿಸಿಕೊಂಡಿರುವುದು ಪತ್ತೆಯಾಗಿದೆ.‌ ಈ ಮೂಲಕ ರಾಜ್ಯದಲ್ಲಿ ಒಟ್ಟು ಒಮಿಕ್ರಾನ್‌ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ.

ಈ ಕುರಿತು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಟ್ವೀಟ್‌ ಮೂಲಕ ಮಾಹಿತಿ ನೀಡಿದ್ದು, ರಾಜ್ಯದಲ್ಲಿ ಇಂದು ಮತ್ತೆ 287 ಹೊಸ ಒಮಿಕ್ರಾನ್‌ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಒಮಿಕ್ರಾನ್ ಸೋಂಕಿತರ ಸಂಖ್ಯೆ 766ಕ್ಕೆ ಏರಿಕೆಯಾಗಿದೆ’ ಎಂದಿದ್ದಾರೆ.

ಇನ್ನು ಈ ನಡುವೆ ದೇಶದಲ್ಲಿ ಕೊರೊನಾ ಸೋಂಕು ನಿನ್ನೆಗಿಂತ ಕೊಂಚ ಇಳಿಮುಖವಾಗಿದ್ದು, ಕಳೆದ 24 ಗಂಟೆಯಲ್ಲಿ 2,58,089 ಲಕ್ಷ ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಂಕಿತರ ಸಾವಿನ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದ್ದು, 24 ಗಂಟೆಯಲ್ಲಿ 385 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.

ದೇಶದಲ್ಲಿ ಈವರೆಗೆ ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 486451 ಕ್ಕೆ ಏರಿಕೆಯಾಗಿದೆ ಇನ್ನು ದೇಶದಲ್ಲಿ 1656341 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, 24 ಗಂಟೆಯಲ್ಲಿ 151740 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ. ದೇಶದಲ್ಲಿ ಈವರೆಗೆ 35237461 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

- Advertisement -






LEAVE A REPLY

Please enter your comment!
Please enter your name here

- Advertisment -

Most Popular

Recent Comments