ಶಿವಮೊಗ್ಗ : ಯುವಕರಿಬ್ಬರ ಮೇಲೆ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಓರ್ವ ಸ್ಥಳದಲ್ಲಿಯೇ ಮೃತಪಟ್ಟಿದ್ರೆ, ಗಂಭೀರವಾಗಿ ಗಾಯಗೊಂಡಿರುವ ಮತ್ತೋರ್ವವನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕೆ.ಆರ್.ಪುರಂ ನಿವಾಸಿ ಜೀವನ್ ಸಾವನ್ನಪ್ಪಿದ್ರೆ, ಸಿಗೇಹಟ್ಟಿಯ ನಿವಾಸಿ ಕೇಶವ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಶಿವಮೊಗ್ಗ ನಗರದ ಎನ್.ಟಿ.ರಸ್ತೆಯಲ್ಲಿರುವ ಸುಂದರ ಆಶ್ರಯ ಲಾಡ್ಜ್ ಬಳಿಯಲ್ಲಿ ಈ ಘಟನೆ ನಡೆದಿದ್ದು, ಕ್ಷುಲಕ ಕಾರಣಕ್ಕೆ ಯುವಕರಿಬ್ಬರ ಮೇಲೆ ಐದಾರು ಮಂದಿಯ ತಂಡ ಮಾರಕಾಸ್ತ್ರಗಳಿಂದ ದಾಳಿ ನಡೆಸಿದೆ. ಯುವಕರ ಗುಂಪು ಚಾಕುವಿನಿಂದ ಇರಿದ ಪರಿಣಾಮ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಆದರೆ ಜೀವನ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಆದರೆ ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಪ್ರಕರಣದ ದಾಖಲು ಮಾಡಿಕೊಂಡಿರುವ ದೊಡ್ಡಪೇಟೆ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆಯನ್ನು ನಡೆಸುತ್ತಿದ್ದಾರೆ.