Tuesday, September 28, 2021
Homeಕರಾವಳಿಮಾಜಿ ಸಚಿವ, ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನ

ಮಾಜಿ ಸಚಿವ, ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಹಿರಿಯ ನಾಯಕ ಆಸ್ಕರ್ ಫರ್ನಾಂಡಿಸ್ ನಿಧನ

- Advertisement -
Renault
- Advertisement -
Home Plus
- Advertisement -

ಮಂಗಳೂರು : ಆಸ್ಪತ್ರೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ರಾಜ್ಯ ಸಭಾ ಸದಸ್ಯ, ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಆಸ್ಕರ್ ಫರ್ನಾಂಡಿಸ್ ಅವರು ಇಂದು ನಿಧನರಾಗಿದ್ದಾರೆ.

ಜುಲೈ 18 ರಂದು ಆಸ್ಕರ್ ಫರ್ನಾಂಡೀಸ್ ಅವರು ಮನೆಯಲ್ಲಿ ಯೋಗ ಮಾಡುತ್ತಿದ್ದ ಸಮಯದಲ್ಲಿ ಜಾರಿ ಬಿದ್ದಿದ್ದರು. ನಂತರ ಮಾಮೂಲಿ ಆರೋಗ್ಯ ತಪಾಸಣೆಗಾಗಿ ಆಸ್ಪತ್ರೆಗೆ ತೆರೆಳಿದಾಗ ತಲೆಯ ಒಳಭಾಗಕ್ಕೆ ಪೆಟ್ಟಾಗಿದ್ದು ತಿಳಿದುಬಂದಿತ್ತು. ನಂತರ ಅವರಿಗೆ ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.

ಆಸ್ಕರ್ ಫರ್ನಾಂಡಿಸ್ ಅವರು ಆಸ್ಪತ್ರೆಗೆ ದಾಖಲಾದ ಮಾಹಿತಿ ಪಡೆದ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು ಕುಟುಂಬಿಕರಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಚಿವ ಎಂ.ಬಿ.ಪಾಟೀಲ್ ಮುಂತಾದವರು ಮಂಗಳೂರಿನ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು. 1941 ಮಾರ್ಚ್ 27ರಂದು ಉಡುಪಿಯಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್ ಅವರು ದಿಲ್ಲಿಯಲ್ಲಿ ನಂತರ ರಾಜೀವ್ ಗಾಂಧಿ, ಸೋನಿಯಾ ಗಾಂಧಿ ಆಪ್ತ ವಲಯದಲ್ಲಿ ಕಾಣಿಸಿಕೊಂಡಿದ್ದರು. 1980ರಲ್ಲಿ ಉಡುಪಿ ಲೋಕಸಭಾ ಕ್ಷೇತ್ರದಿಂದ ಗೆದ್ದು ಮೊದಲ ಬಾರಿಗೆ ಸಂಸತ್ ಪ್ರವೇಶ ಮಾಡಿದ ಆಸ್ಕರ್ ಫರ್ನಾಂಡಿಸ್ ಅವರು ನಾಲ್ಕು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು. ಕೇಂದ್ರ ಸಾರಿಗೆ ಸಚಿವ, ಕಾರ್ಮಿಕ ಸಚಿವರಾಗಿ ಆಸ್ಕರ್ ಫರ್ನಾಂಡಿಸ್ ಕಾರ್ಯ ನಿರ್ವಹಿಸಿದ್ದರಾಗಿದೆ.

- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments