- Advertisement -
ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ ಏರಿಕೆ ಖಂಡಿಸಿ ನಾಳೆ ಬಂಟ್ವಾಳದಲ್ಲಿ ಧರಣಿ ಸತ್ಯಾಗ್ರಹ…!!!
ಮಾಜಿ ಸಚಿವ ರಮಾನಾಥ ರೈ ನೇತೃತ್ವದಲ್ಲಿ ಪಾದಯಾತ್ರೆ…!!!
ಬಂಟ್ವಾಳ: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ನ ಬೆಲೆ ಏರಿಕೆ ವಿರುದ್ಧ ನಾಳೆ ಬಂಟ್ವಾಳ ವಿಧಾನ ಸೌಧದ ಮುಂಭಾಗ ಧರಣಿ ಸತ್ಯಾಗ್ರಹ ಹಾಗೂ ಪಾದಯಾತ್ರೆ ನಡೆಯಲಿದೆ. ಈ ಸತ್ಯಾಗ್ರಹ ಮಾಜಿ ಸಚಿವ ಬಿ.ರಮಾನಾಥ ರೈ ಅವರ ನೇತೃತ್ವದಲ್ಲಿ ನಡೆಯಲಿದ್ದು, ಬ್ಲಾಕ್ ಕಾಂಗ್ರೆಸ್ , ಜಿಲ್ಲಾ ಪಂಚಾಯತ್, ಪುರಸಭಾ ಸದಸ್ಯರು ಭಾಗಿಯಾಗಲಿದ್ದಾರೆ. ಬೆಳಿಗ್ಗೆ 10 ಗಂಟೆಗೆ ಆರಂಭವಾಗಲಿರುವ ಧರಣಿ ಸತ್ಯಾಗ್ರಹ ಸಂಜೆ 4 ಗಂಟೆಯವರೆಗೂ ನಡೆಯಲಿದೆ.