- Advertisement -
ಇಂದು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕೋವಿಡ್-19 ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅವರು, “ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದೇನೆ. ಕೋವಿಡ್ ವಿರುದ್ಧದ ಜಾಗತಿಕ ಹೋರಾಟವನ್ನು ಬಲಪಡಿಸಲು ನಮ್ಮ ವಿಜ್ಞಾನಿಗಳು ಹಾಗೂ ವೈದ್ಯರು ತ್ವರಿತ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗಿದೆ ಎಂದಿದ್ದಾರೆ.
ಕೊರೋನಾ ಲಸಿಕೆ ಯನ್ನು ತೆಗೆದುಕೊಳ್ಳಲು ಅರ್ಹರಾದವರೆಲ್ಲರೂ ಲಸಿಕೆ ಪಡೆಯಿರಿ. ನಾವೆಲ್ಲರೂ ಒಟ್ಟಾಗಿ ಭಾರತವನ್ನು ಕೊವಿಡ್ 19 ಮುಕ್ತಗೊಳಿಸೋಣ ಎಂದು ಮನವಿ ಮಾಡಿದ್ದಾರೆ.