ತುಂಬಿದ್ದ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಶ್ನೆ…
ಹಾಸನ: ಹತ್ತಾನೆ ಬೇಕಾದ್ರು ಸಾಕ್ತೀನಿ.. ನಮ್ಮಪ್ಪ ಮದ್ವೆ ಆಗು ಅಂತಿದ್ದಾರೆ ಏನು ಮಾಡೋಣ? ಎನ್ನುತ್ತಾ ತುಂಬಿದ ಸಭೆಯಲ್ಲಿ ಪ್ರಜ್ವಲ್ ರೇವಣ್ಣ ಪ್ರಶ್ನಿಸಿದರು.
ಕಾಡಾನೆ ಸಮಸ್ಯೆ ಬಗೆಹರಿಸುವ ಬಗ್ಗೆ ಮಂಗಳವಾರ ಸಕಲೇಶಪುರದ ಪುರಭವನದಲ್ಲಿ ಸಾರ್ವಜನಿಕರೊಂದಿಗೆ ಸಮಾಲೋಚನೆ ಸಭೆ ನಡೆಯುತಿತ್ತು. ಆ ವೇಳೆ ಮಾಜಿ ಶಾಸಕ ವಿಶ್ವನಾಥ್, ಹೊಳೆನರಸೀಪುರ ಕ್ಷೇತ್ರಕ್ಕೆ ಹತ್ತು ಆನೆ ಬಿಟ್ರೆ ಸಮಸ್ಯೆ ಬಗೆಹರಿಯುತ್ತೆ ಎಂದರು. ಇದಕ್ಕೆ ಪ್ರತಿಕ್ರಿಯಿಸಿದ ಪ್ರಜ್ವಲ್, ಹತ್ತು ಆನೆ ಬೇಕಾದ್ರು ಸಾಕ್ತೀನಿ… ನಮ್ಮಪ್ಪ ಮದುವೆ ಆಗು ಅಂತಿದ್ದಾರೆ… ಏನು ಮಾಡೋದು? ಎಂದು ತಮಾಷೆ ಮಾಡಿದರು. ಸಭೆಯಲ್ಲಿದ್ದವರೆಲ್ಲ ಒಂದು ಕ್ಷಣ ನಗೆಗಡಲಲ್ಲಿ ತೇಲಿದರು.
.