Monday, January 17, 2022
Homeಕರಾವಳಿಅಪಾಯಕ್ಕೆ ಆಹ್ವಾನ ನೀಡುವಂತಿರುವ ಪುತ್ತೂರಿನ ಭಕ್ತಕೋಡಿ ಸರ್ಕಾರಿ ಶಾಲೆ ; ದುರಸ್ತಿಗೆ ಆಗ್ರಹ

ಅಪಾಯಕ್ಕೆ ಆಹ್ವಾನ ನೀಡುವಂತಿರುವ ಪುತ್ತೂರಿನ ಭಕ್ತಕೋಡಿ ಸರ್ಕಾರಿ ಶಾಲೆ ; ದುರಸ್ತಿಗೆ ಆಗ್ರಹ

- Advertisement -
Renault






- Advertisement -

ದಕ್ಷಿಣ ಕನ್ನಡಜಿಲ್ಲೆಯ ಪುತ್ತೂರಿನ ಭಕ್ತಕೋಡಿ ಸರ್ಕಾರಿ ಶಾಲೆ ಅಪಾಯಕ್ಕೆ ಆಹ್ವಾನ ನೀಡುವಂತಿದೆ.

ಇಂದೋ – ನಾಳೆಯೋ ಧರೆಗುರುಳಲು ಸಿದ್ಧವಾಗಿ ನಿಂತ ಕಟ್ಟಡದಲ್ಲೇ ಮಕ್ಕಳು ಪಾಠ ಕೇಳಬೇಕಾದ ಸ್ಥಿತಿಯಿದೆ. ಆದರೆ, ಶಾಲೆಯ ಪರಿಸ್ಥಿತಿ ಬಗ್ಗೆ ಶಿಕ್ಷಣ ಅಧಿಕಾರಿಗಳಾಗಲಿ ಅಥವಾ ಜನಪ್ರತಿನಿಧಿಗಳಾಗಲಿ ಗಮನಹರಿಸುತ್ತಿಲ್ಲ ಎಂಬ ಆರೋಪ ಕೇಳಿ ಬಂದಿದೆ.ಅಪಾಯಕ್ಕೆ ಆಹ್ವಾನ ನೀಡುವಂತಿರುವ ಪುತ್ತೂರಿನ ಭಕ್ತಕೋಡಿ ಸರ್ಕಾರಿ ಶಾಲೆ: ದುರಸ್ತಿಗೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಈ ಶಾಲೆಗೆ ಬಡ ಕುಟುಂಬಗಳ ಮಕ್ಕಳು ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದು, ಜೀವ ಕೈಯಲ್ಲಿ ಹಿಡಿದು ತರಗತಿ ಕೇಳಬೇಕಾದ ಸ್ಥಿತಿಯಲ್ಲಿದ್ದಾರೆ. ಹೆಚ್ಚಿನ ಸಂಖ್ಯೆಯ ಮಕ್ಕಳನ್ನು ಹೊಂದಿರುವ ಈ ಶಾಲೆಯ ದುಃಸ್ಥಿತಿಯನ್ನು ಶಿಕ್ಷಣ ಅಧಿಕಾರಿಗಳ ಹಾಗೂ ಜನಪ್ರತಿನಿಧಿಗಳ ಗಮನಕ್ಕೂ ತಂದಿದ್ದರೂ, ಯಾರೊಬ್ಬರೂ ಈ ಶಾಲೆಯತ್ತ ಮುಖವೆತ್ತಿ ನೋಡಿಲ್ಲ ಎನ್ನಲಾಗ್ತಿದೆ.

ಗುಣಮಟ್ಟದ ಶಿಕ್ಷಣ ನೀಡುವ ಸರ್ಕಾರಿ ಶಾಲೆ ಎಂಬ ಹೆಗ್ಗಳಿಕೆ:

53 ವರ್ಷಗಳ ಇತಿಹಾಸ ಹೊಂದಿರುವ ಪುತ್ತೂರಿನ ಭಕ್ತಕೋಡಿ ಸರ್ಕಾರಿ ಶಾಲೆ ಹಿರಿಯ ಪ್ರಾಥಮಿಕ ಶಾಲೆ ಇದೀಗ ಕುಸಿದು ಬೀಳುವ ಹಂತದಲ್ಲಿದೆ. ಗ್ರಾಮೀಣ ಭಾಗದಲ್ಲಿರುವ ಈ ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಕ್ಕಳ ಸಂಖ್ಯೆಯೂ ಹೆಚ್ಚಾಗುತ್ತಿದ್ದು, ಗುಣಮಟ್ಟದ ಶಿಕ್ಷಣ ನೀಡುವ ಸರ್ಕಾರಿ ಶಾಲೆ ಎಂಬ ಹೆಸರು ಇದಕ್ಕಿದೆ. ಆದರೆ, ಈ ಶಾಲೆಯ ಕಟ್ಟಡ ಮಾತ್ರ ಕುಸಿದು ಬೀಳುವ ಸ್ಥಿತಿಯಲ್ಲಿದೆ.

ಶಾಲೆಯ ಛಾವಣಿಗೆ ಹಾಕಿದ ಮರದ ರೀಪುಗಳು ಮುರಿದು ಬೀಳುವ ಸಾಧ್ಯತೆಯಿದೆ. ಕಟ್ಟಡದ ನಾಲ್ಕು ಗೋಡಗಳ ನಡುವೆ ಭಾರಿ ಗಾತ್ರದ ಬಿರುಕು ಕಾಣಿಸಿಕೊಂಡಿದ್ದು, ನಾಲ್ಕು ಗೋಡೆಗಳಿಗೂ ಪರಸ್ಪರ ಸಂಬಂಧವೇ ಇಲ್ಲದಂತಾಗಿದೆ. ಈ ಕಟ್ಟಡದಲ್ಲಿ ನಾಲ್ಕು ತರಗತಿಗಳು ನಿತ್ಯ ನಡೆಯುತ್ತಿದ್ದು, ಒಟ್ಟು 130 ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ.

ಮಳೆಗಾಲದಲ್ಲಿ ಈ ಶಾಲೆಯ ಎಲ್ಲ ತರಗತಿಯಲ್ಲಿ ಮಳೆ ನೀರು ಸೋರುವ ಕಾರಣ ತರಗತಿಯಲ್ಲಿ ಮಕ್ಕಳ ಜೊತೆಗೆ ಛಾವಣಿಯಿಂದ ಬೀಳುವ ನೀರು ಸಂಗ್ರಹಿಸಲು ದೊಡ್ಡ ಗಾತ್ರದ ಪಾತ್ರೆಗಳನ್ನು ಇಡಬೇಕಾಗುತ್ತದೆ ಎನ್ನುತ್ತಾರೆ ಶಾಲೆಯ ಶಿಕ್ಷಕರು.

ಶಾಲೆಯ ದುಃಸ್ಥಿತಿಯ ಬಗ್ಗೆ ಸಾರ್ವಜನಿಕರು ಈಗಾಗಲೇ ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ಆ ಮೂಲಕ ಶಾಸಕರ ಗಮನಕ್ಕೂ ತಂದಿದ್ದಾರೆ. ಕಳೆದ 4 ವರ್ಷಗಳಿಂದ ಈ ಶಾಲೆಯ ದುಃಸ್ಥಿತಿ ಮತ್ತಷ್ಟು ಹೆಚ್ಚಾಗಿದ್ದು, ಪುಟ್ಟ ಮಕ್ಕಳನ್ನು ಸೇರಿಸಿ ತರಗತಿ ಮಾಡುವುದಾದರೂ ಹೇಗೆ ಎಂದು ಶಾಲೆಯ ಸಿಬ್ಬಂದಿ ಹಾಗೂ ಸಾರ್ವಜನಿಕರು ಪ್ರಶ್ನಿಸಿದ್ದಾರೆ. ದುಃಸ್ಥಿತಿಯಲ್ಲಿರುವ ಈ ಕಟ್ಟಡದಲ್ಲಿ ಅನಾಹುತ ಸಂಭವಿಸಿದಲ್ಲಿ ನೂರಾರು ಮಕ್ಕಳಿಗೆ ಸಮಸ್ಯೆಯಾಗುವ ಸಾಧ್ಯತೆಯಿದೆ. ಹೀಗಾಗಿ ಸಂಬಂಧಪಟ್ಟವರು ಕೂಡಲೇ ಈ ಬಗ್ಗೆ ಗಮನ ಹರಿಸಬೇಕಿದೆ.

- Advertisement -



Home Plus


LEAVE A REPLY

Please enter your comment!
Please enter your name here

- Advertisment -

Most Popular

Recent Comments