ಪುತ್ತೂರು : ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಸೇರಿದ ಜಾಗದಲ್ಲಿ ಅಕ್ರಮ ಕಟ್ಟಡ ನಿರ್ಮಾಣ ಮಾಡಿದ್ದನ್ನು ಇಂದು ಬಿಗಿ ಪೊಲೀಸ್ ಭದ್ರತೆಯಲ್ಲಿ ಅಧಿಕಾರಿಗಳು ತೆರವುಗೊಳಿಸಲಾಯಿತು.
ದೇವಸ್ಥಾನದ ಜಾಗದಲ್ಲಿ ಬಾಡಿಗೆ ರೂಪದಲ್ಲಿ ನೆಲೆಸಿದ್ದ ಕುಟುಂಬಕ್ಕೆ ಸೇರಿದ ಸುಮಾರು 21 ಸೆಂಟ್ಸ್ ಜಾಗದ ಅಕ್ರಮ ಬಳಕೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ಈ ಸ್ಥಳದಲ್ಲಿ ದೇವಸ್ಥಾನದ ಗಮನಕ್ಕೆ ತರದೆ, ಅನುಮತಿ ಪಡೆಯದೆ ಕಟ್ಟಡ ನಿರ್ಮಾಣ ಮಾಡಲಾಗುತ್ತಿದ್ದು, ದೇವಸ್ಥಾನದ ಆಸ್ತಿ ರಕ್ಷಣೆಯ ಹಿನ್ನಲೆಯಲ್ಲಿ ಮತ್ತು ಸಮರ್ಪಕ ದಾಖಲೆ ಪತ್ರ ನೀಡದ ಹಿನ್ನಲೆಯಲ್ಲಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ತೆರವು ಕಾರ್ಯಾಚರಣೆ ನಡೆಸಿದ್ದಾರೆ.
ಇನ್ನು ಕಾರ್ಯಾಚರಣೆ ಬಗ್ಗೆ ಸ್ಪಷ್ಟನೆ ನೀಡಿರುವ ಪುತ್ತೂರು ಸಹಾಯಕ ಆಯುಕ್ತ ಯತೀಶ್ ಉಳ್ಳಾಲ್ ದೇವಸ್ಥಾನದ ಜಾಗದಲ್ಲಿ ಯಾವುದೇ ಅಕ್ರಮಕ್ಕೆ ಅವಕಾಶವಿಲ್ಲ ಮತ್ತು ಸಮರ್ಪಕ ದಾಖಲೆ ಪತ್ರ ನೀಡದ ಹಿನ್ನಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳಿದ್ದಾರೆ.