Saturday, June 3, 2023
Homeಕ್ರೈಂಶಾಲಾ ಬಾಲಕಿಯ ಅತ್ಯಾಚಾರ, ವಿಡಿಯೋ ವೈರಲ್: ಮೂವರು ಬಂಧನ

ಶಾಲಾ ಬಾಲಕಿಯ ಅತ್ಯಾಚಾರ, ವಿಡಿಯೋ ವೈರಲ್: ಮೂವರು ಬಂಧನ

- Advertisement -


Renault

Renault
Renault

- Advertisement -

ಚಿಕ್ಕಮಗಳೂರು : ಶಾಲೆಗೆ ಹೋಗುತ್ತಿದ್ದ ಬಾಲಕಿಯನ್ನು ಅಡ್ಡಗಟ್ಟಿ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ನಂತರ ಅತ್ಯಾಚಾರದ ವಿಡಿಯೋವನ್ನು ತನ್ನ ಸ್ನೇಹಿತರಿಗೆ ಶೇರ್ ಮಾಡಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಜಿಲ್ಲೆಯ ಗ್ರಾಮವೊಂದರಲ್ಲಿ ನಡೆದಿದೆ.

ಕಳೆದ ಕೆಲ ದಿನಗಳ ಹಿಂದೆಯಷ್ಟೇ 15 ವರ್ಷದ ಬಾಲಕಿಯ ಮೇಲೆ 30ಕ್ಕೂ ಅಧಿಕ ಮಂದಿ ಅತ್ಯಾಚಾರಗೈದ ಸುದ್ದಿ ಬೆಳಕಿಗೆ ಬಂದಿತ್ತು. ಇದೀಗ ಅಂತಹದ್ದೇ ಸುದ್ದಿ ಕಾಫಿನಾಡು ಚಿಕ್ಕಮಗಳೂರಲ್ಲಿ ಬೆಳಕಿಗೆ ಬಂದಿರುವುದು ಮಲೆನಾಡಿಗರ ಆತಂಕಕ್ಕೆ ಕಾರಣವಾಗಿದೆ. 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಬಾಲಕಿನಿತ್ಯವೂ 4 ಕಿ.ಮೀ. ನಡೆದುಕೊಂಡು ಹೋಗುತ್ತಿದ್ದಳು. ಬಾಲಕಿ ಶಾಲೆಗೆ ತೆರಳುತ್ತಿದ್ದಾಗ ಅಡ್ಡಗಟ್ಟಿದ ಯುವಕ ಬಾಲಕಿಯನ್ನು ಪಕ್ಕದಲ್ಲಿಯೇ ಇದ್ದ ಮನೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ. ನಂತರ ವಿಡಿಯೋ ಹಾಗೂ ಪೋಟೋವನ್ನು ಬಾಲಕಿಗೆ ತೋರಿಸಿ ಕರೆದಾಗ ಬರಬೇಕು. ಇಲ್ಲವಾದ್ರೆ ವಿಡಿಯೋ ಸೋಶೀಯಲ್ ಮೀಡಿಯಾದಲ್ಲಿ ಲೀಕ್ ಮಾಡುವುದಾಗಿ ಬೆದರಿಕೆಯೊಡ್ಡಿದ್ದಾನೆ.

ಅಷ್ಟೇ ಅಲ್ಲದೇ ಅತ್ಯಾಚಾರದ ವಿಡಿಯೋವನ್ನು ಕಾಮುಕ ತನ್ನ ಸ್ನೇಹಿತರಿಗೆ ಶೇರ್ ಮಾಡಿದ್ದಾರೆ. ನಂತರದಲ್ಲಿ ಬಾಲಕಿ ನಡೆದ ಘಟನೆಯನ್ನ ತನ್ನ ಪೋಷಕರಿಗೆ ತಿಳಿಸಿದ್ದು, ಪೋಷಕರು ಪೊಲೀಸರಿಗೆ ಸುದ್ದು ಮುಟ್ಟಿಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಕಾಮುಕ ಹಾಗೂ ವಿಡಿಯೋ ಶೇರ್ ಮಾಡಿಸಿಕೊಂಡಿದ್ದ ಇಬ್ಬರನ್ನು ಬಂಧಿಸಿದ್ದಾರೆ.


ಮಲೆನಾಡಿನ ಭಾಗಗಳಲ್ಲಿ ಅತ್ಯಾಚಾರ ಪ್ರಕರಣಗಳು ಬೆಳಕಿಗೆ ಬರುತ್ತಿರುವುದು ಪೋಷಕರನ್ನು ಆತಂಕಕ್ಕೆ ಈಡುಮಾಡಿದೆ. ಅತ್ಯಾಚಾರಿಗಳ ವಿರುದ್ದ ಕಠಿಣ ಕ್ರಮಕೈಗೊಳ್ಳುವಂತೆ ಪೋಷಕರು ಆಗ್ರಹಿಸುತ್ತಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments