ಮಂಡ್ಯ : ಡೆತ್ ನೋಟಲ್ಲಿ ಅಂತ್ಯಕ್ರಿಯೆಗೆ ಸಿದ್ದರಾಮಯ್ಯ ಬರಬೇಕು ಅಂತಾ ಬರೆದಿದ್ದಾನೆ. ನನಗೆ ಅಷ್ಟೊಂದು ಪರಿಚಯವಿಲ್ಲ. ಅದರೂ ನನ್ನ ಅಭಿಮಾನಿಯಾಗಿದ್ದಾನೆ. ಎಲ್ಲಕ್ಕಿಂತ ಮುಖ್ಯವಾಗಿ ಮನುಷ್ಯತ್ವ ಮುಖ್ಯ. ನನಗೆ ಗೊತ್ತಿಲ್ಲದೆ ದೊಡ್ಡ ಅಭಿಮಾನಿಯಾಗಿ ಡೆತ್ ನೋಟ್ ನಲ್ಲಿ ಬರೆದುಕೊಂಡಿದ್ದಾನೆ. ಅಭಿಮಾನಿ ಆಗಲಿ, ಯಾರೇ ಆಗಲಿ ಅಂತ್ಯಕ್ರಿಯೆಗೆ ಬರಬೇಕು ಅಂತಾ ಬರೆದುಕೊಂಡಿದ್ದಾನೆ. ಅಂತ್ಯಕ್ರಿಯೆಗೆ ಬಂದಿದ್ದೇನೆ ಎಂಬುದಾಗಿ ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಡ್ಯ ತಾಲೂಕಿನ ಕೋಡಿದೊಡ್ಡಿಯಲ್ಲಿ ಅಭಿಮಾನಿ ರಾಮಕೃಷ್ಣ ಅಂತ್ಯ ಸಂಸ್ಕಾರದಲ್ಲಿ ಭಾಗಿಯಾದ ಬಳಿಕ, ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಸಿದ್ದರಾಮಯ್ಯ, ಸಾಮಾನ್ಯ ಕುಟುಂಬದಿಂದ ಬಂದ ವ್ಯಕ್ತಿ ರಾಮಕೃಷ್ಣ.
ಅವರ ಮನೆಯವರಿಗೆ ಬಹಳ ನಷ್ಟವಾಗಿದೆ. ಅವರ ಕುಟುಂಬಕ್ಕೆ ಸಾಂತ್ವನ ಹೇಳಲಾಗಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದರು.
ಚಿಕ್ಕವಯಸ್ಸಿನಲ್ಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಸರಿಯಲ್ಲ. ಬಹಳ ದೀರ್ಘಕಾಲ ಬಾಳಿ ಬದುಕಬೇಕಾದ ವ್ಯಕ್ತಿ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥಿಸುತ್ತೇನೆ. ಆತ್ಮಹತ್ಯೆ ಯಾವುದೇ ಸಮಸ್ಯೆಗಳಿಗೆ ಪರಿಹಾರವಲ್ಲ. ಎಷ್ಟೇ ಸಮಸ್ಯೆ ಇದ್ರು ಎದುರಿಸಬೇಕು. ಯಾರು ಕೂಡ ಆತ್ಮಹತ್ಯೆ ಮಾಡಿಕೊಳ್ಳವಂತ ದೃಢ ನಿರ್ಧಾರ ತೆಗೆದುಕೊಳ್ಳಬೇಡಿ ಎಂಬುದಾಗಿ ಇದೇ ಸಂದರ್ಭದಲ್ಲಿ ಕಿವಿಮಾತು ಹೇಳಿದರು.