ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ನಡುವಲ್ಲೇ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಆರಂಭಗೊಂಡಿದೆ. ಆದರೆ ಈ ಬಾರಿ ಪರೀಕ್ಷೆಗಳು ಯಾವಾಗ ನಡೆಯುತ್ತೆ ಅನ್ನೋ ಗೊಂದಲಗಳಿಗೆ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ತೆರೆ ಎಳೆದಿದ್ದಾರೆ.
ಬಾಗಲಕೋಟೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಮೇ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಜೂನ್ ಮೊದಲ ವಾರದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಆಯೋಜನೆ ಮಾಡಲಾಗುತ್ತದೆ ಎಂದಿದ್ದಾರೆ. ಪರೀಕ್ಷೆ ಯಾವ ರೀತಿ ನಡೆಸಬೇಕು ಅಂತ ಎಸ್ಎಸ್ಎಲ್ಸಿ ಮತ್ತು ಪಿಯು ಬೋಡ್೯ಗಳು ತೀರ್ಮಾ೯ನಿಸುತ್ತವೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಹಿನ್ನೆಲೆಯಲ್ಲಿ ಶಾಲಾರಂಭ ವಿಳಂಭವಾಗಿದ್ದು, ಈಗಾಗಲೇ ಶೇಕಡಾ 30ರಷ್ಟು ಪಠ್ಯ ಕಡಿಮೆ ಮಾಡಲಾಗಿದೆ. ಮುಂದಿನ ತರಗತಿ ಕಲಿಕೆಗೆ ಕೊರತೆಯಾಗದಂತೆ ಪಠ್ಯವಿಷಯ ಕಡಿಮೆ ಮಾಡಿದ್ದೇವೆ. ಕೋವಿಡ್ ಕಾರಣದಿಂದ ಪರೀಕ್ಷೆಗೆ ಶಾಲಾ ಮಕ್ಕಳ ಹಾಜರಾತಿ ಕಡ್ಡಾಯವಲ್ಲ ಎಂದು ತಿಳಿಸಿದರು.