Tuesday, September 27, 2022
Homeಕರಾವಳಿಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಹಾರಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ...

ಮಂಗಳೂರು ನ್ಯಾಯಾಲಯದ ಆರನೇ ಮಹಡಿಯಿಂದ ಹಾರಿ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಆತ್ಮಹತ್ಯೆ

- Advertisement -
Renault

Renault

Renault

Renault


- Advertisement -

ಮಂಗಳೂರು : ಅಪ್ರಾಪ್ತ ವಯಸ್ಸಿನವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ವ್ಯಕ್ತಿಯೊಬ್ಬ, ಪೋಕ್ಸೊ ಪ್ರಕರಣದ ಆರೋಪಿಯೋರ್ವ ಮಂಗಳೂರಿನ ಜಿಲ್ಲಾ ಸತ್ರ ನ್ಯಾಯಾಲಯದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಈತ ಭೀಕರವಾಗಿ ಸಾವಿಗೀಡಾಗಿದ್ದಾನೆ. ತಲಪಾಡಿ ಕಿನ್ಯ ನಿವಾಸಿ ರವಿರಾಜ್ (31) ಮೃತ ವ್ಯಕ್ತಿಯಾಗಿದ್ದಾರೆ.

ಆರೋಪಿ ಕುಡಿದ ಮತ್ತಿನಲ್ಲಿ ಅಪ್ರಾಪ್ತ ವಯಸ್ಸಿನವಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿದ್ದು, ಸ್ಥಳೀಯರು ಈತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಿನ್ನೆ ಪೋಕ್ಸೋ ಪ್ರಕರಣದಡಿ ಬಂಧಿತನಾಗಿದ್ದನು. ಇಂದು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ನ್ಯಾಯಾಲಯದ ಆರನೇ ಮಹಡಿಯಿಂದ ಕೆಳಕ್ಕೆ ಹಾರಿದ್ದು, ಕ್ಷಣಹೊತ್ತಲ್ಲೇ ನೆಲಕ್ಕೆ ಬಿದ್ದಿದ್ದಾನೆ. ಆರೋಪಿಯ ತಲೆಗೆ ಭಾರೀ ಪೆಟ್ಟು ಬಿದ್ದಿದ್ದು, ತಲೆಯಿಂದ ಅಧಿಕ ಪ್ರಮಾಣದ ರಕ್ತ ಸೋರಿಕೆಯಾಗಿದೆ. ಬಿದ್ದ ರಭಸಕ್ಕೆ ಗಂಭೀರ ಗಾಯವಾಗಿದ್ದು, ಸ್ಥಳದಲ್ಲಿ ರಕ್ತದ ಮಡುಗಟ್ಟಿದೆ. ಬಳಿಕ ಆತ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತೆರಳಿ, ಪರಿಶೀಲನೆ ನಡೆಸಿದ್ದಾರೆಂದು ಮಾಹಿತಿ ದೊರಕಿದೆ.

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments