Tuesday, September 28, 2021
Homeಕರಾವಳಿನೇಣು ಬಿಗಿದು ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆ

ನೇಣು ಬಿಗಿದು ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಆತ್ಮಹತ್ಯೆ

- Advertisement -
Renault
- Advertisement -
Home Plus
- Advertisement -

ಉಡುಪಿ : ಉಡುಪಿಯ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕುಕ್ಕಿಕಟ್ಟೆ ಎಂಬಲ್ಲಿ ನಡೆದಿದೆ. ಕುಕ್ಕಿಕಟ್ಟೆ ನಿವಾಸಿ ಆಶಾ ಶೆಟ್ಟಿ (48) ಮೃತಪಟ್ಟವರಾಗಿದ್ದಾರೆ.

ಮೃತರ ಬಳಿ ಡೆತ್ ನೋಟ್ ಲಭ್ಯವಾಗಿದ್ದು, ಪತ್ರದಲ್ಲಿ ನೇತ್ರದಾನ ಮಾಡುವಂತೆ ಹಾಗೂ ಇನ್ನಿತರ ವಿಷಯಗಳು ಉಲ್ಲೇಖಿಸಿದ್ದಾರೆಂದು ತಿಳಿದು ಬಂದಿದೆ. ಕಣ್ಣುಗಳು ರಕ್ಷಿಸಿಡುವ ಪ್ರಕ್ರಿಯೆ ನಡೆಸಲು ಮೃತದೇಹವನ್ನು ಮಣಿಪಾಲ ಆಸ್ಪತ್ರೆಗೆ ರವಾನಿಸಲಾಗಿದೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಘಟನಾ ಸ್ಥಳಕ್ಕೆ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್.ಶೆಟ್ಟಿ, ಕಾರ್ಯದರ್ಶಿ ರಕ್ಷಿತಾ ಶೆಟ್ಟಿ ಭೇಟಿ ನೀಡಿದ್ದಾರೆ.

ವೈಯುಕ್ತಿಕ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ. ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸದಸ್ಯೆಯಾಗಿರುವ ಇವರು, ತುಳು ಕೂಟ, ಭಜನಾ ಮಂಡಳಿ, ಚಂಡೆ ಬಳಗದಲ್ಲಿ ಸಕ್ರಿಯವಾಗಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisment -

Most Popular

Recent Comments