ಸುಳ್ಯ: ಕಾನೂನು ಕಾಲೇಜಿನ ಸ್ಕಾರ್ಫ್ ವಿವಾದಕ್ಕೆ ತೆರೆ
ಸ್ಕಾರ್ಫ್ ಹಾಕಿ ಪರೀಕ್ಷೆ ಬರೆಯಲು ಅವಕಾಶ
ಸುಳ್ಯ: ಇಲ್ಲಿನ ಕಾನೂನು ಕಾಲೇಜು ಒಂದರಲ್ಲಿ ವಿದ್ಯಾರ್ಥಿನಿಗೆ ಸ್ಕಾರ್ಫ್ ಹಾಕಿ ಪರೀಕ್ಷೆ ಬರೆಯಲು ಅವಕಾಶ ನಿರಾಕರಿಸಿದ ಘಟನೆ ಕೆಲಕಾಲ ವಿವಾದ ಪರಿಸ್ಥಿತಿ ನಿರ್ಮಿಸಿತ್ತು.
ಕಾಲೇಜಿನ ವಿದ್ಯಾರ್ಥಿಗಳಿಗೆ ನಿಯಮದ ಪ್ರಕಾರ ಸಮವಸ್ತ್ರ ಹಾಗೂ ಪರೀಕ್ಷೆ ಸಂಬಂಧಿತ ವಸ್ತುಗಳು ಹೊರತು ಪಡಿಸಿ ಇತರ ವಸ್ತುಗಳನ್ನು ತರಲು ಅವಕಾಶವಿಲ್ಲ ಎಂಬುದಾಗಿತ್ತು. ಈ ನಡುವೆ ಪ್ರಥಮ ಕಾನೂನು ಪದವಿಯ ವಿದ್ಯಾರ್ಥಿನಿಯೊಬ್ಬಳು ತಲೆಗೆ ಸ್ಕಾರ್ಫ್ ಕಟ್ಟಿಕೊಂಡು ಪರೀಕ್ಷೆ ಬರೆಯಲು ಹೋಗಿದ್ದು, ಆಗ ಕಾಲೇಜಿನ ಪ್ರಾಂಶುಪಾಲರು ಪರೀಕ್ಷಾ ಹಾಲ್ ಗೆ ಸ್ಕಾರ್ಫ್ ಕಟ್ಟಿಕೊಂಡು ಬರುವಂತಿಲ್ಲ, ಇದು ನಿಯಮಬಾಹಿರ ಎಂದು ಹೇಳಿದ್ದಾರೆ ಎನ್ನಲಾಗಿದೆ.
ಇದರಿಂದ ಅಸಮಾಧಾನಗೊಂಡ ವಿದ್ಯಾರ್ಥಿನಿ ಪರೀಕ್ಷೆ ಬರೆಯೋದಿಲ್ಲ ಎಂದು ಸ್ಕಾರ್ಫ್ ತೆಗೆಯಲು ನಿರಾಕರಿಸಿದ್ದಳು.
ಘಟನೆ ಸಂಬಂಧ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿ ಸಂಘಟನೆ ಕಾರ್ಯಕರ್ತರು ಇಂದು ಕಾನೂನು ಕಾಲೇಜು ಎದುರು ಸೇರಿದ್ದರು. ಹಾಗೆಯೇ ಈ ಸಂದರ್ಭ ಪೊಲೀಸರು ಮತ್ತು ವಿದ್ಯಾರ್ಥಿನಿಯ ಪೋಷಕರು ಕೂಡಾ ಕಾಲೇಜಿಗೆ ಬಂದಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಉದಯಕೃಷ್ಣ, ಅಕಾಡೆಮಿ ಅಡ್ವೈಸರ್ ಪ್ರೊ.ಬಾಲಚಂದ್ರ ಗೌಡ, ವಿದ್ಯಾರ್ಥಿನಿ ಹಾಗೂ ಆಕೆಯ ಪೋಷಕರ ನಡುವೆ ಮಾತುಕತೆ ನಡೆದಿದೆ. ನಡೆಯಿತು. ‘ವಿದ್ಯಾರ್ಥಿನಿಯ ಇಚ್ಛೆಯಂತೆ ಸ್ಕಾರ್ಫ್ ಹಾಕಿ ಪರೀಕ್ಷೆ ಬರೆಯಲಿ. ಆದರೆ ಪರೀಕ್ಷೆ ಮೇಲ್ವಿಚಾರಕರು ಬಂದು ತಪಾಸಣೆ ನಡೆಸಿದರೆ ಅದಕ್ಕೆ ಸಹಕಾರ ನೀಡಬೇಕು’ ಎಂದು ಕಾಲೇಜಿನವರು ಹೇಳಿದಾಗ ವಿದ್ಯಾರ್ಥಿನಿ ಹಾಗೂ ಪೋಷಕರು ಒಪ್ಪಿದ್ದಾರೆ.
ಘಟನೆಯ ಕುರಿತು ಪ್ರತಿಕ್ರಿಯೆ ನೀಡಿದ ಕ್ಯಾಂಪಸ್ ಫ್ರಂಟ್ ವಿದ್ಯಾರ್ಥಿ ಸಂಘಟನೆಯ ನಾಯಕ ಅನ್ಸಾರ್ ಬೆಳ್ಳಾರೆ, ‘ ಎಲ್ಲಾ ಕಾಲೇಜುಗಳಲ್ಲಿಯೂ ಪರೀಕ್ಷೆ ನಡೆಯುತ್ತಿದೆ. ಎಲ್ಲಿಯೂ ಸ್ಕಾರ್ಫ್ ತೆಗೆಯಬೇಕೆಂದು ಹೇಳಿಲ್ಲ. ಇಲ್ಲಿ ಮಾತ್ರ ಹೇಳುತ್ತಿದ್ದಾರೆ. ಯುನಿವರ್ಸಿಟಿಯಲ್ಲಿಯೂ ಆ ನಿಯಮ ಇಲ್ಲ ಮತ್ತು ವಿದ್ಯಾರ್ಥಿನಿಯ ಇಚ್ಛೆಗೆ ವಿರುದ್ಧವಾಗಿ ಸ್ಕಾರ್ಫ್ ತೆಗೆಯುವುದು ಸರಿಯಲ್ಲ’ ಎಂದರು.
ಅಕಾಡೆಮಿ ಅಡ್ವೈಸರ್ ಪ್ರೊ.ಬಾಲಚಂದ್ರ ಗೌಡ ಅವರು ಈ ಬಗ್ಗೆ ಪ್ರತಿಕ್ರಿಯಿಸಿದ್ದು, ‘ಯುನಿವರ್ಸಿಟಿ ಪರೀಕ್ಷೆ ಸಂದರ್ಭ ಪ್ರಾಂಶುಪಾಲರು ನಿಯಮವನ್ನು ಹೇಳಿದ್ದಾರೆ. ಕಾಲೇಜಿನ ಶಿಸ್ತು ಕಾಪಾಡುವುದು ಎಲ್ಲರ ಜವಾಬ್ದಾರಿ. ವಿದ್ಯಾರ್ಥಿ ತನ್ನ ಇಚ್ಚೆಯಂತೆ ಸ್ಕಾರ್ಫ್ ಹಾಕಿ ಪರೀಕ್ಷೆ ಬರೆಯಬಹುದೆಂಬ ನಿರ್ಧಾರಕ್ಕೆ ಬರಲಾಗಿದೆ. ಆದರೆ ಸ್ಕ್ವಾಡ್ ನವರು ಬಂದಾಗ ತಪಾಸಣೆ ನಡೆಸುತ್ತಾರೆ. ಅದಕ್ಕೆ ಸಹಕಾರ ನೀಡಬೇಕೆಂದು ಹೇಳಿದ್ದೇವೆ. ಅದಕ್ಕೆ ಅವರು ಒಪ್ಪಿಕೊಂಡಿದ್ದಾರೆ’ ಎಂದು ತಿಳಿಸಿದರು.
Why they entertain communal outfits like Campus front inside the college premises.
A lesson to all school and college managements before giving admission to Madrasa educated fundamentalists.