Saturday, December 3, 2022
Homeಕರಾವಳಿಮಡಿಕೇರಿ ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್..!!

ಮಡಿಕೇರಿ ಲಾಡ್ಜ್ ನಲ್ಲಿ ನೇಣಿಗೆ ಶರಣಾದ ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್..!!

- Advertisement -
Renault

Renault

Renault

- Advertisement -

ಕೊಡಗು: ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್​ ನೇಣಿಗೆ ಶರಣಾಗಿರುವ ಘಟನೆ ಮಡಿಕೇರಿ ವಸತಿಗೃಹದಲ್ಲಿ ನಡೆದಿದೆ.

ಶಿವಾನಂದ್ (45) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಮಂಗಳೂರು ದಕ್ಷಿಣ ವಿಭಾಗದ ಬಿಇಓ ಕಚೇರಿಯಲ್ಲಿ ಸೂಪರಿಂಟೆಂಡೆಂಟ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಮಡಿಕೇರಿಯ ಹಳೆಯ ಬಸ್ ನಿಲ್ದಾಣದ ಬಳಿಯಿರುವ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಶಿವಾನಂದ್​ ಅವರು ಮಂಗಳೂರು ಬಜ್ಪೆ ಮೂಲದವರು. ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಮಡಿಕೇರಿ ನಗರ ಠಾಣೆಯ ಪೊಲೀಸರು ಪರಿಶೀಲನೆ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆತ್ಮಹತ್ಯೆ ಸುದ್ದಿ ತಿಳಿದ ಕೂಡಲೇ ಕುಟುಂಬಸ್ಥರಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments