Wednesday, June 16, 2021
Homeಕರಾವಳಿಈ ವೀಕೆಂಡ್ ಕರ್ಫ್ಯೂ ಇರುವುದಿಲ್ಲ ಕರ್ನಾಟಕ ಸರಕಾರದ ಮಾರ್ಗಸೂಚಿ ಪಾಲನೆ : ದ.ಕ.ಜಿಲ್ಲಾಡಳಿತ ಸ್ಪಷ್ಟನೆ

ಈ ವೀಕೆಂಡ್ ಕರ್ಫ್ಯೂ ಇರುವುದಿಲ್ಲ ಕರ್ನಾಟಕ ಸರಕಾರದ ಮಾರ್ಗಸೂಚಿ ಪಾಲನೆ : ದ.ಕ.ಜಿಲ್ಲಾಡಳಿತ ಸ್ಪಷ್ಟನೆ

- Advertisement -
- Advertisement -Home Plus
- Advertisement -
Platform
Maya Builders

ದಕ್ಷಿಣ ಕನ್ನಡ : ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂವನ್ನು ಜಾರಿಗೊಳಿಸಲಾಗಿತ್ತು. ಬಳಿಕ ಕರ್ನಾಟಕ ಸರಕಾರ ಹೊಸ ಮಾರ್ಗಸೂಚಿಯನ್ನು ಜಾರಿಗೊಳಿಸಿದ್ದು, ಜನರಲ್ಲಿ ಗೊಂದಲವನ್ನು ಮೂಡಿಸಿತ್ತು. ದ.ಕ. ಜಿಲ್ಲೆಯಲ್ಲಿ ಈ ವಾರ ಪ್ರತ್ಯೇಕವಾದ ಯಾವುದೇ ವಾರಾಂತ್ಯ ಕರ್ಫ್ಯೂ ಇರುವುದಿಲ್ಲ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದರಂತೆ ಅಗತ್ಯ ಸಾಮಗ್ರಿಗಳ ಖರೀದಿಗೆ ಬೆಳಗ್ಗೆ 6 ರಿಂದ 10 ಗಂಟೆಯವರೆಗೆ ವಾರಾಂತ್ಯದಲ್ಲೂ ಅನುಮತಿಸಲಾಗಿದೆ. ಅಂದರೆ, ಒಟ್ಟಾರೆಯಾಗಿ ಹೇಳಬೇಕಾದರೆ ನಿನ್ನೆ ಮೊನ್ನೆಯಿಂದ ಏನೆಲ್ಲಾ ಲಭ್ಯ ಇತ್ತೋ ಅದೆಲ್ಲವೂ ಶನಿವಾರ ಮತ್ತು ಭಾನುವಾರಗಳಂದು ಕೂಡ ದೊರೆಯಲಿವೆ.

ಕಳೆದ ವಾರ ವಾರಾಂತ್ಯ, ವೀಕೆಂಡ್ ಕರ್ಫ್ಯೂ ಜಾರಿಯಲ್ಲಿತ್ತು ಆದರೆ ಈ ವಾರ ಕರ್ನಾಟಕ ಸರಕಾರದ ಮಾರ್ಗಸೂಚಿಯನ್ನೇ ಅನುಸರಿಸಲಾಗುತ್ತಿದ್ದು, ವಾರಾಂತ್ಯ ಕರ್ಫ್ಯೂ ಇರುವುದಿಲ್ಲ ಎಂದು ಜಿಲ್ಲಾಡಳಿತ ಸ್ಪಷ್ಟನೆಯನ್ನು ನೀಡಿದೆ.

LEAVE A REPLY

Please enter your comment!
Please enter your name here

- Advertisment -

Most Popular

Recent Comments