- Advertisement -
ತೊಕ್ಕೊಟ್ಟು(24-01-2021): ರಸ್ತೆದಾಟುತ್ತಿದ್ದ ವ್ಯಕ್ತಿಯೋರ್ವರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದಿರುವ ಘಟನೆ ತೊಕ್ಕೊಟ್ಟು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪಾಣೆಮಂಗಳೂರು ನಿವಾಸಿ ಹಮ್ಮಬ್ಬ(60) ಮೃತ ದುರ್ದೈವಿ. ಹಮ್ಮಬ್ಬ ತೊಕ್ಕೊಟ್ಟಿನ ಸಹರಾ ಆಸ್ಪತ್ರೆಯ ಎದುರು ಹೆದ್ದಾರಿ ದಾಟುತ್ತಿದ್ದ ವೇಳೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹಮ್ಮಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.