Tuesday, September 27, 2022
HomeUncategorizedಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ; ಮೂವರು ಅಂದರ್

ಆಟೋ ರಿಕ್ಷಾದಲ್ಲಿ ಗಾಂಜಾ ಸಾಗಾಟ; ಮೂವರು ಅಂದರ್

- Advertisement -
Renault

Renault

Renault

Renault


- Advertisement -

ಉಡುಪಿ : ಅಟೋ ರಿಕ್ಷಾದಲ್ಲಿ‌ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಣಿಪಾಲ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ದಾಳಿ ನಡೆಸಿದ ಪೊಲೀಸರು ಶೀಂಬ್ರಾ ಸೇತುವೆ ಬಳಿ ಬಂಧಿಸಿದ್ದಾರೆ.

ಮಹಾರಾಷ್ಟ್ರ ಮೂಲದ ಗೌತಮ್‌‌ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲ ಗಿರಿಯ ಕೃಷ್ಣ ಜಲಗಾರ್ ಬಂಧಿತ ಆರೋಪಿಗಳು. ಬಂಧಿತ ಆರೋಪಿ ಗಳಿಂದ 2,66,000 ರೂ. ಮೌಲ್ಯದ ಸುಮಾರು 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋ ರಿಕ್ಷಾವನ್ನು ವಶಪಡಿಸಿಕೊಳ್ಳಲಾಗಿದೆ. ರಿಕ್ಷಾದಲ್ಲಿ ಮಹಾರಾಷ್ಟ್ರ ದಿಂದ ಮಣಿಪಾಲದಲ್ಲಿ ಗಾಂಜಾ ಮಾರಾಟ ಮಾಡಲು ಸಾಗಾಟ ಮಾಡುತ್ತಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ ಈ ದಾಳಿ ನಡೆಸಲಾಗಿದೆ.
ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆಯನ್ನು ನಡೆಸುತ್ತಿದ್ದಾರೆ.

ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್.ಪಿ ಕುಮಾರ ಚಂದ್ರ ಹಾಗೂ ಡಿವೈಎಸ್ಪಿ ಸುಧಾಕರ ನಾಯಕ್‌ ನೇತೃತ್ವದಲ್ಲಿ , ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್.ಎಂ ಗೌಡ, ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಣಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಪ್ರೊಬೇಷನರಿ ಎಸ್ಸೈ ದೇವರಾಜ್ ಸಿದ್ದಣ್ಣ ಬಿರಾದಾರ್ ಮತ್ತು ಅಮೀನ್‌ಸಾಬ್‌ ಮೌಲಾಸಾಬ್ ಅತ್ತಾರ್, ಎ.ಎಸ್.ಐ ಶೈಲೇಶ್, ಹೆಚ್.ಸಿಗಳಾದ ದಯಾಕರ್ ಪ್ರಸಾದ್, ವಿಶ್ವಜಿತ್ , ನವೀನ್, ಅಬ್ದುಲ್ ರಝಾಕ್ ಪಿ.ಸಿ ಸಂತೋಷ್ ಎಚ್.ಟಿ, ರೇವಣಸಿದ್ದಪ್ಪ, ಲೊಕೇಶ್ ಮತ್ತು ಆದರ್ಶ , ಬೈಂದೂರು ವೃತ್ತದ ಸಿಬ್ಬಂಧಿಗಳಾದ ಚಂದ್ರ, ಅಶೋಕ, ನವೀನ್ ಮತ್ತು ಗುರು ಪ್ರಸಾದ್ ರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.ಕಾರ್ಯಾಚರಣೆ ನಡೆಸಿರುವ ತಂಡವನ್ನು ಮಂಗಳೂರು ಐ.ಜಿ.ಪಿ ದೇವಜ್ಯೋತಿ ರೈ ಶ್ಲಾಘಿಸಿದ್ದಾರೆ.

- Advertisement -


LEAVE A REPLY

Please enter your comment!
Please enter your name here

- Advertisment -

Most Popular

Recent Comments