Wednesday, May 31, 2023
HomeUncategorizedಉಳ್ಳಾಲ ನರ್ಸಿಂಗ್ ಕಾಲೇಜು ಸೀಲ್ ಡೌನ್: ವಿದ್ಯಾರ್ಥಿನಿಯರಲ್ಲಿ ಕೋವಿಡ್ ಲಕ್ಷಣ ಕಾರಣ!

ಉಳ್ಳಾಲ ನರ್ಸಿಂಗ್ ಕಾಲೇಜು ಸೀಲ್ ಡೌನ್: ವಿದ್ಯಾರ್ಥಿನಿಯರಲ್ಲಿ ಕೋವಿಡ್ ಲಕ್ಷಣ ಕಾರಣ!

- Advertisement -


Renault

Renault
Renault

- Advertisement -

ಉಳ್ಳಾಲ: ಇಲ್ಲಿನ ಅಬ್ಬಕ್ಕ ಸರ್ಕಲ್ ಬಳಿ ಇರುವ ಖಾಸಗಿ ನರ್ಸಿಂಗ್ ಕಾಲೇಜಿನ 80 ವಿದ್ಯಾರ್ಥಿಗಳಲ್ಲಿ 39 ವಿದ್ಯಾರ್ಥಿಗಳಲ್ಲಿ ಕೋವಿಡ್ 19 ಲಕ್ಷಣ ಕಂಡು ಬಂದಿದ್ದು ಕಾಲೇಜನ್ನು ಫೆ. 19ರವರೆಗೆ ಸೀಲ್ ಡೌನ್ ಮಾಡಲಾಗಿದೆ.

ಇಲ್ಲಿನ ಖಾಸಗಿ ನರ್ಸಿಂಗ್ ಕಾಲೇಜಿನ 39 ವಿದ್ಯಾರ್ಥಿಗಳಲ್ಲಿ ಸೋಂಕು ಕಂಡು ಬಂದಿದೆ. ಈ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಹೆಚ್ಚಿನ ವಿದ್ಯಾರ್ಥಿಗಳು ಕೇರಳ ಮೂಲದವರಾಗಿದ್ದು ಕಾಲೇಜು ಆರಂಭದ ಬಳಿಕ ವಿದ್ಯಾರ್ಥಿಗಳಿಗೆ ಕಡ್ಡಾಯ ಕೋವಿಡ್ ಪರೀಕ್ಷೆ ನಡೆಸಿದಾಗ ಸೋಂಕು ಪತ್ತೆಯಾಗಿದೆ.

ಕಾಲೇಜಿನ ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ನಗರಸಭಾ ಕಮಿಷನರ್ ರಾಯಪ್ಪ ಭೇಟಿ ನೀಡಿ ವಿದ್ಯಾರ್ಥಿಗಳಿಗೆ ಕಾಲೇಜಿನಲ್ಲೇ ಕ್ವಾರಂಟೈನ್ ಮತ್ತು ಚಿಕಿತ್ಸೆಗೆ ವ್ಯವಸ್ಥೆ ಮಾಡಿದ್ದು, ಎಲ್ಲಾ ವಿದ್ಯಾರ್ಥಿಗಳಿಗೆ ಕ್ವಾರಂಟೈನ್ ಗೆ ಸೂಚಿಸಲಾಗಿದೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments