- Advertisement -
ಉಪ್ಪಿನಂಗಡಿಯಲ್ಲಿ ಭೀಕರ ರಸ್ತೆ ಅಪಘಾತ: ಮಹಿಳೆ ಸ್ಳದಲ್ಲೇ ಸಾವು…!!
ಉಪ್ಪಿನಂಗಡಿ: ಸಿಮೆಂಟ್ ಮಿಕ್ಸರ್ ವಾಹನ ಮತ್ತು ಬೈಕ್ ನಡುವಿನ ರಸ್ತೆ ಅಪಘಾತದಲ್ಲಿ ಬೈಕ್ ಸಹ ಸವಾರೆ ಮಹಿಳೆ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಉಪ್ಪಿನಂಗಡಿಯಲ್ಲಿ ನಡೆದಿದೆ.
ಮೃತಪಟ್ಟ ಮಹಿಳೆಯನ್ನು ಸರಳಿಕಟ್ಟೆ ನಿವಾಸಿ ಸಖಿನಾ ಎಂದು ಗುರುತಿಸಲಾಗಿದೆ. ಇವರ ಪತಿ ರಫೀಕ್ ಅವರಿಗೂ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ.
ಉಪ್ಪಿನಂಗಡಿಯ ಆದಿತ್ಯ ಹೋಟೆಲ್ ಬಳಿ ಘಟನೆ ನಡೆದಿದೆ. ಸಿಮೆಂಟ್ ಮಿಕ್ಸರ್ ವಾಹನವು ಬಿ.ಸಿ.ರೋಡ್ ನಿಂದ ಉದನೆ ಕಡೆಗೆ ಹೋಗುತ್ತಿತ್ತು. ಈ ವೇಳೆ ಢಿಕ್ಕಿ ಸಂಭವಿಸಿದೆ.