- Advertisement -
ವಿಜಯಪುರ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿಗೆ ಶಿವಮೊಗ್ಗದಲ್ಲಿ ವರ್ಚುವಲ್ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ಲೋಕಸಬಾ ಸದಸ್ಯ ಬಿ.ವೈ.ರಾಘವೇಂದ್ರ, ವಿಧಾನ ಪರಿಷತ್ ಸದಸ್ಯ ರುದ್ರೇಗೌಡ, ಶಾಸಕ ಅರಗ ಜ್ನಾನೇಂದ್ರ,
ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕಪಿಲ್ ಮೋಹನ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಸ್. ಸೆಲ್ವಕುಮಾರ್,
ಜಿಲ್ಲಾಧಿಕಾರಿ ಶಿವಕುಮಾರ್ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
ವಿಜಯಪುರದಲ್ಲಿ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಂಸದ ರಮೇಶ ಜಿಗಜಿಣಗಿ, ಶಾಸಕ ದೇವಾನಂದ ಚೌವ್ಹಾಣ್ ಉಪಸ್ಥಿತರಿದ್ದರು