Sunday, May 28, 2023
Homeಕರಾವಳಿವಿಟ್ಲದಲ್ಲಿ ಬೈಕ್-ಬೊಲೆರೋ ಢಿಕ್ಕಿ: ಬೈಕ್ ಸವಾರ ಸಾವು

ವಿಟ್ಲದಲ್ಲಿ ಬೈಕ್-ಬೊಲೆರೋ ಢಿಕ್ಕಿ: ಬೈಕ್ ಸವಾರ ಸಾವು

- Advertisement -


Renault

Renault
Renault

- Advertisement -

ವಿಟ್ಲ:  ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರರೋರ್ವರು ಮೃತಪಟ್ಟ ಘಟನೆ ಫೆ.೮ರಂದು ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ನಡೆದಿದೆ.

ಘಟನೆಯಿಂದಾಗಿ ಬೈಕ್ ಸವಾರ ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ(೫೫ ವ.) ರವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೈಕ್ ಹಾಗೂ ಬೊಲೆರೋ ವಾಹನ ವಿಟ್ಲ ಭಾಗದಿಂದ ಉಕ್ಕುಡ ಭಾಗಕ್ಕೆ ತೆರಳುತ್ತಿದ್ದಾಗ ಕಾಶಿಮಠ ಸಮೀಪ ಬೊಲೆರೋ ವಾಹನ‌ ಬೈಕ್ ನ ಹಿಂಭಾಗಕ್ಕೆ ಡಿಕ್ಕಿಯಾಗಿದೆ. ಘಟನೆಯಿಂದಾಗಿ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ರವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.ಘಟನಾ  ಸ್ಥಳಕ್ಕೆ ವಿಟ್ಲ ಠಾಣಾ ಎಸ್.ಐ ವಿನೋದ್ ರೆಡ್ಡಿ ರವರ ನೇತೃತ್ವದ ಪೊಲೀಸರ ತಂಡ ತೆರಳಿ ಮಾಹಿತಿ ಸಂಗ್ರಹಿಸಿದೆ. ಮೃತದೇಹವನ್ನು ವಿಟ್ಲ ಸರಕಾರ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಬೊಲೆರೋ ವಾಹನವನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments