Saturday, June 3, 2023
HomeUncategorizedನಾಳೆಯವರೆಗೆ ರಾಜ್ಯದಲ್ಲಿ ಮಳೆ: ಹವಾಮಾನ ಇಲಾಖೆ ಸೂಚನೆ

ನಾಳೆಯವರೆಗೆ ರಾಜ್ಯದಲ್ಲಿ ಮಳೆ: ಹವಾಮಾನ ಇಲಾಖೆ ಸೂಚನೆ

- Advertisement -


Renault

Renault
Renault

- Advertisement -

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ರಾಜ್ಯಾದ್ಯಂತ ಇಂದು ಮತ್ತು ನಾಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕ ಮಾತ್ರವಲ್ಲದೆ ಕೇರಳ, ಛತ್ತೀಸ್​ಗಢ, ತೆಲಂಗಾಣ, ತಮಿಳುನಾಡಿನಲ್ಲೂ ಇನ್ನೂ ಮೂರ್ನಾಲ್ಕು ದಿನಗಳ ಕಾಲ ಮಳೆಯಾಗಲಿದೆ.

ಕರ್ನಾಟಕದ ದಕ್ಷಿಣ ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಫೆ.23ರವರೆಗೆ ಮಳೆಯ ಪ್ರಮಾಣ ಹೆಚ್ಚಾಗಿರಲಿದೆ. ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಯಾವ್ಯಾವ ಜಿಲ್ಲೆಗಳಲ್ಲಿ ಮಳೆ ಬರುವ ಸಾಧ್ಯತೆ:
ದಕ್ಷಿಣ ಕನ್ನಡ,ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್,ರಾಯಚೂರು,ವಿಜಯಪುರ, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ,  ಧಾರವಾಡ, ಗದಗ,ಹಾವೇರಿ,ಕಲಬುರಗಿ,ಕೊಪ್ಪಳಕೊಡಗು,ಹಾಸನ, ಕೋಲಾರ, ಮಂಡ್ಯ, ರಾಮನಗರ, ಮೈಸೂರು, ಶಿವಮೊಗ್ಗ, ತುಮಕೂರಿನಲ್ಲಿ ಫೆ.23ರವರೆಗೂ ಮಳೆಯಾಗಲಿದೆ

- Advertisement -

LEAVE A REPLY

Please enter your comment!
Please enter your name here

Most Popular

Recent Comments