Monday, October 2, 2023
HomeUncategorizedಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ...!!!

ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ…!!!

- Advertisement -



Renault

Renault
Renault

- Advertisement -

ವಿಶ್ವಸಂಸ್ಥೆ: ಕೋವಿಡ್ 19 ನಿಯಂತ್ರಣಕ್ಕಾಗಿ ಅಸ್ಟ್ರಾಜೆನೆಕಾ ಕೋವಿಡ್ ಲಸಿಕೆ ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮತಿ ನೀಡಿದೆ ಎನ್ನಲಾಗಿದೆ.

ಈ ಬಗ್ಗೆ ಅಂತಾರಾಷ್ಟ್ರೀಯ ಸುದ್ದಿಸಂಸ್ಥೆ ವರದಿ ಮಾಡಿದ್ದು, ಕೋವಿಡ್-19 ನಿಯಂತ್ರಣದ ನಿಟ್ಟಿನಲ್ಲಿ ಅಸ್ಟ್ರಾಜೆನೆಕಾ-ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಸಹಯೋಗದಲ್ಲಿ ಅಭಿವೃದ್ಧಿಪಡಿಸಿರುವ ಅಸ್ಟ್ರಾಜೆನೆಕಾ ಲಸಿಕೆಯನ್ನು ತುರ್ತು ಬಳಕೆಗೆ ವಿಶ್ವ ಆರೋಗ್ಯ ಸಂಸ್ಥೆ ಅನುಮೋದನೆ ನೀಡಿದೆ ಎನ್ನಲಾಗಿದೆ.

ಖ್ಯಾತ ಅಂತಾರಾಷ್ಟ್ರೀಯ ಔಷಧ ತಯಾರಿಕ ಕಂಪನಿ ಅಸ್ಟ್ರಾಜೆನೆಕಾ ಮತ್ತು ಆಕ್ಸ್‌ಫರ್ಡ್‌ ವಿಶ್ವವಿದ್ಯಾಲಯ ಜಂಟಿಯಾಗಿ ಈ ಲಸಿಕೆಯನ್ನು ತಯಾರಿಸಿದ್ದು, ಭಾರತದಲ್ಲಿ ಸೆರಂ ಇನ್ ಸ್ಟಿಟ್ಯೂಟ್ ಆಫ್ ಇಂಡಿಯಾ ಸಂಸ್ಥೆ, ಕೊರಿಯಾದಲ್ಲಿ ಎಸ್‌ಕೆಬಯೊ ಸಂಸ್ಥೆಗಳು ಈ ಲಸಿಕೆಯನ್ನು ಉತ್ಪಾದನೆ ಮಾಡುತ್ತಿವೆ.

ಇನ್ನು ವಿಶ್ವಸಂಸ್ಥೆ ಜಾರಿಗೆ ತಂದಿರುವ ಕೋವ್ಯಾಕ್ಸ್ ಕಾರ್ಯಕ್ರಮದ ಅಡಿಯಲ್ಲಿ ಜಗತ್ತಿನ ವಿವಿಧ ದೇಶಗಳಿಗೆ ಕೋವಿಡ್ ಲಸಿಕೆ ವಿತರಣೆ ಮಾಡಲಾಗುತ್ತಿದೆ. ಪ್ರಮುಖವಾಗಿ ವಿಶ್ವಸಂಸ್ಥೆ ಅಸ್ಟ್ರಾಜೆನೆಕಾ ಲಸಿಕೆಯನ್ನು ಹೆಚ್ಚಾಗಿ ವಿತರಣೆ ಮಾಡುವ ಕುರಿತು ಚಿಂತನೆಯಲ್ಲಿ ತೊಡಗಿದ್ದು, ಇತರೆ ಲಸಿಕೆಗಳಿಗೆ ಹೋಲಿಸಿದರೆ ಅಸ್ಟ್ರಾಜೆನೆಕಾ ಲಸಿಕೆ ಕಡಿಮೆ ಬೆಲೆಯಲ್ಲಿ ಲಭ್ಯವಿದೆ ಮತ್ತು ನಿರ್ವಹಣೆಯು ಸರಳವಾಗಿದೆ. 8 ರಿಂದ 12 ವಾರಗಳಲ್ಲಿ 2 ಡೋಸ್‌ ಲಸಿಕೆ ನೀಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ.

ಈ ಕುರಿತಂತೆ ಮಾತನಾಡಿರುವ ವಿಶ್ವ ಆರೋಗ್ಯ ಸಂಸ್ಥೆ ಮಹಾ ನಿರ್ದೇಶಕ ಟೆಡ್ರೊಸ್‌ ಅಧಾನೊಮ್‌ ಗೆಬ್ರೆಯೆಸುಸ್‌ ಅವರು, ‘ನಾವು ಲಸಿಕೆ ತಯಾರಿಕೆ ಸಂಖ್ಯೆಯನ್ನು ಹೆಚ್ಚಿಸಬೇಕಿದ್ದು ಲಸಿಕೆಗಳನ್ನು ವೇಗವಾಗಿ ವಿತರಣೆ ಮಾಡಬೇಕಿದೆ ಎಂದು ಹೇಳಿದ್ದಾರೆ.

- Advertisement -

LEAVE A REPLY

Please enter your comment!
Please enter your name here

Most Popular

Recent Comments