ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡಿರುವ ಅಭಿಮಾನಿ ಅಂತ್ಯಕ್ರಿಯೆಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗವಹಿಸಲಿದ್ದಾರೆ. ವೈಯಕ್ತಿಕ ಸಮಸ್ಯೆಗಳಿಂದ ಮಂಡ್ಯ ತಾಲೂಕಿನ ಕೋಡಿದೊಡ್ಡಿ ಗ್ರಾಮದ ಯುವಕ ಕೃಷ್ಣ(24) ಆತ್ಮಹತ್ಯೆಗೆ ಶರಣಾಗಿದ್ದು, ಸಿದ್ದರಾಮಯ್ಯ ಅವರು ತನ್ನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಬೇಕು ಎಂದು ಕೊನೆಯ ಆಸೆಯನ್ನು ಡೆತ್ ನೋಟ್‌ನಲ್ಲಿ ಬರೆದಿಟ್ಟಿದ್ದಾನೆ.
ಅಭಿಮಾನಿಯ ಕೊನೆಯ ಆಸೆ ಈಡೇರಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಮುಂದಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿರುವ ಕೃಷ್ಣ ಅಂತಿಮಯಾತ್ರೆಯಲ್ಲಿ ಇಂದು (ಫೆ.18) ಭಾಗವಹಿಸುತ್ತಿದ್ದಾರೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಕೃಷ್ಣ, ತನ್ನ ಅಂತ್ಯಕ್ರಿಯೆಯಲ್ಲಿ ರಾಕಿಂಗ್ ಸ್ಟಾರ್ ಯಶ್ ಅಣ್ಣ ಭಾಗವಹಿಸಬೇಕು. ಜೊತೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಕೂಡ ಭಾಗವಹಿಸಬೇಕು ಎಂದು ಬರೆದಿಟ್ಟಿದ್ದ. ಯಾಕೆಂದರೆ ನಾನು ಅವರಿಬ್ಬರ ಅಪ್ಪಟ ಅಭಿಮಾನಿ ಎಂದು ತಿಳಿಸಿದ್ದ. ವಿಷಯ ತಿಳಿಯುತ್ತಿದ್ದಂತೆ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಸಿದ್ದರಾಮಯ್ಯ ಅವರು ನಿರ್ಧರಿಸಿದ್ದಾರೆ.
ನಾನು ನಿಮ್ಮಿಬ್ಬರ ಅಭಿಮಾನಿ ಸರ್. ದಯವಿಟ್ಟು ಕೈಮುಗಿದು ಕೇಳಿಕೊಳ್ಳುತ್ತೇನೆ. ನನ್ನ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿ. ದಯವಿಟ್ಟು ನನ್ನ ಕೊನೆಯ ಆಸೆಯನ್ನು ಈಡೇರಿಸಿ ಎಂದು ಕೃಷ್ಣ ಮನವಿ ಮಾಡಿಕೊಂಡಿದ್ದಾನೆ.